ಬಂಟ್ವಾಳ: ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಪುಂಜಾಲಕಟ್ಟೆ ಆಯ್ಕೆ ಆಗಿದ್ದಾರೆ. ಬಂಟ್ವಾಳ ಪ್ರೆಸ್ ಕ್ಲಬ್ ನಲ್ಲಿ ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಅಧ್ಯಕ್ಷತೆಯಲ್ಲಿ ನಡೆದ ಮಹಾ ಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದರು. ನೂತನ ಉಪಾಧ್ಯಕ್ಷರಾಗಿ ಯಾದವ್ ಅಗ್ರಬೈಲ್, ಪ್ರಧಾನ ಕಾರ್ಯದರ್ಶಿಯಾಗಿ ಮೌನೇಶ್ ವಿಶ್ವಕರ್ಮ, ಜೊತೆ ಕಾರ್ಯದರ್ಶಿಯಾಗಿ ಇಮ್ತಿಯಾಝ್ ಶಾ ತುಂಬೆ, ಕೋಶಾಧಿಕಾರಿಯಾಗಿ ವೆಂಕಟೇಶ್ ಬಂಟ್ವಾಳ ಆಯ್ಕೆಯಾದರು. ಸಭೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಲಿ ವಿಟ್ಲ ವರದಿ ವಾಚಿಸಿದರು. ಕೋಶಾಧಿಕಾರಿ ಯಾದವ್ ಅಗ್ರಬೈಲ್ ಲೆಕ್ಕಪತ್ರ ಮಂಡಿಸಿದರು. ಅಧ್ಯಕ್ಷ ಹರೀಶ್ ಮಾಂಬಾಡಿ ಮಾತನಾಡಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರ ಮಾಡಿದರು.
Kshetra Samachara
16/09/2021 07:26 pm