ಬಂಟ್ವಾಳ: ಇತ್ತೀಚೆಗೆ ಅಗಲಿದ ಪಕ್ಷದ ಮುಖಂಡರಾದ ಆಸ್ಕರ್ ಫೆರ್ನಾಂಡಿಸ್, ಹಾಗೂ ಡಾ. ಪ್ರವೀಣ್ ಸೆರಾ ಅವರಿಗೆ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ನ ವಿವಿಧ ಘಟಕಗಳ ವತಿಯಿಂದ ಶ್ರದ್ದಾಂಜಲಿ ಸಭೆ ಪಕ್ಷದ ಕಚೇರಿಯಲ್ಲಿ ನಡೆಯಿತು.
ಮಾಜಿ ಸಚಿವ ಬಿ. ರಮಾನಾಥ ರೈ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ರೊಸಲಿನ್ ಶೇರ ಮತ್ತು ಡಾ. ರಾಕೇಶ್ ಶೇರ, ಬಂಟ್ವಾಳ ಬ್ಲಾಕ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್ ಹಾಗೂ ಸುದೀಪ್ ಕುಮಾರ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ,ಪದ್ಮಶೇಖರ್ ಜೈನ್, ಎಂ. ಎಸ್ ಮೊಹಮ್ಮದ್, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ಮಾಲಿನ್ಯ ನಿಯಂತ್ರಣ ಮಂಡಳಿ ಮಾಜಿ ಸದಸ್ಯರಾಧ ಪಿಯೂಸ್ ಎಲ್ ರೊಡ್ರಿಗಸ್, ಬಂಟ್ವಾಳ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಿಲ್ಮಾ ಮೋರಸ್ ಹಾಗೂ ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜಯಂತಿ ವಿ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
26/09/2021 04:42 pm