ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಲ್ಪೆ: ಪಡುಕೆರೆ ಬೀಚ್ ನಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಛ ಭಾರತ ಅಭಿಯಾನ

ಮಲ್ಪೆ: ಮಹಾಲಕ್ಷ್ಮಿ ಕೋ-ಆಪರೇಟಿವ್ ಬ್ಯಾಂಕ್ ಲಿ. ಉಡುಪಿ ವತಿಯಿಂದ ನೇಶನ್ ಫಸ್ಟ್ ತಂಡದ ಸಹಭಾಗಿತ್ವದಲ್ಲಿ ಇಂದು ಪಡುಕೆರೆ ಬೀಚ್ ನಲ್ಲಿ "ಸ್ವಚ್ಛ ಭಾರತ ಅಭಿಯಾನ"ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಅಭಿಯಾನದಲ್ಲಿ ತೊಡಗಿಸಿಕೊಂಡವರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪ್ರವೀಣ್ ಶೆಟ್ಟಿ ಕಪ್ಪೆಟ್ಟು ಹಾಗೂ ಜಿಲ್ಲಾಧಿಕಾರಿಗಳಾದ ಕೂರ್ಮಾ ರಾವ್ ಎಂ, ಉಡುಪಿ ನಗರ ಸಭೆಯ ಪೌರಾಯುಕ್ತರಾದ ಉದಯ್ ಶೆಟ್ಟಿ, ನೇಶನ್ ಫಸ್ಟ್ ತಂಡದ ಸೂರಜ್ ಕಿದಿಯೂರು ಮತ್ತು ನೇಶನ್ ಫಸ್ಟ್ ತಂಡದ ಸದಸ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

02/10/2021 01:07 pm

Cinque Terre

12.43 K

Cinque Terre

0

ಸಂಬಂಧಿತ ಸುದ್ದಿ