ಮೂಡುಬಿದಿರೆ: ಕಡಂದಲೆ ಗ್ರಾಮದ ತುಲಮುಗೇರ್ ಪ್ರದೇಶದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ವೇಳೆ ಮೂಡುಬಿದಿರೆ ಪೊಲೀಸರು ದಾಳಿ ನಡೆಸಿ ನಾಲ್ವರು ವ್ಯಕ್ತಿಗಳ ಸಹಿತ ಮರಳುಗಾರಿಕೆಗೆ ಬಳಸುತ್ತಿದ್ದ ರೂ. 16ಲಕ್ಷ ಮೌಲ್ಯದ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಭಾತ ಶೆಟ್ಟಿ, ಇಮ್ರಾನ್ ಎಡಪದವು, ಕಿಟ್ಟ ಮತ್ತು ಮೋನು ಎಂಬವರು ಕಡಂದಲೆಯ ಶಾಂಭವಿ ನದಿಯಲ್ಲಿ ಕ್ರೇನ್ ಬಳಸಿ ಅಕ್ರಮವಾಗಿ ಮರಳನ್ನು ತೆಗೆಯುತ್ತಿದ್ದರು. ಈ ಸಂದರ್ಭ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಬಿ.ಎಸ್.ದಿನೇಶ್ ಕುಮಾರ್ ನೇತೃತ್ವದ ತಂಡವು ದಾಳಿ ನಡೆಸಿದ್ದು ಲಾರಿ, ಕ್ರೇನ್ ಮತ್ತು ದೋಣಿ ಸಹಿತ ಮರಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kshetra Samachara
13/10/2021 07:38 pm