ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಖ್ಯಾತ ವಕೀಲ ಅಲೆವೂರು ಶ್ರೀಪತಿ ಆಚಾರ್ಯ ಇನ್ನಿಲ್ಲ

ಉಡುಪಿ: ಉಡುಪಿಯ ಖ್ಯಾತ ವಕೀಲ ಅಲೆವೂರು ಶ್ರೀಪತಿ ಆಚಾರ್ಯ (83) ಅಲ್ಪಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ವಯೋಸಹಜ ಖಾಯಿಲೆಗೆ ಚಿಕಿತ್ಸೆಗೆಂದು ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಕೊನೆಯುಸಿರೆಳೆದರು.

ಕರಾವಳಿಯಲ್ಲಿ ಹೆಸರು ಮಾಡಿದ್ದ ಹಿರಿಯ ವಕೀಲರಾದ ಶ್ರೀಪತಿ ಆಚಾರ್ಯ ಹಲವು ದಶಕಗಳ ಕಾನೂನು ಸೇವೆಯಲ್ಲಿ ಭಾರಿ ಜನಪ್ರಿಯತೆ ಪಡೆದಿದ್ದರು. ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ 12 ಗಂಟೆಗೆ ಬೈಲೂರಿನ ಸೂರ್ಯ ಕಿರಣ್ ಅವರ ನಿವಾಸದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದೆಂದು ಕುಟುಂಬ ಮೂಲಗಳು ತಿಳಿಸಿವೆ.

ಇವರು ಪತ್ನಿ, ಇಬ್ಬರು ಹೆಣ್ಣು ಮಕ್ಕಳ ಸಹಿತ ಅಪಾರ ಹಿತೈಷಿಗಳನ್ನು ಅಗಲಿದ್ದಾರೆ.

Edited By : PublicNext Desk
Kshetra Samachara

Kshetra Samachara

28/10/2021 08:53 am

Cinque Terre

3.31 K

Cinque Terre

0

ಸಂಬಂಧಿತ ಸುದ್ದಿ