ಬಂಟ್ವಾಳ: ದ.ಕ.ಜಿಲ್ಲೆಯಲ್ಲೇ ಮೊದಲ ಪ್ರಯೋಗವೆಂಬಂತೆ ಬಂಟ್ವಾಳ ತಾಲೂಕಿನ ಕಡೇಶ್ವಾಲ್ಯ ಗ್ರಾ.ಪಂ.ನ ಸ್ವಚ್ಛ ಸಂಕೀರ್ಣದ ತ್ಯಾಜ್ಯ ಸಂಗ್ರಹಣಾ ವಾಹನಕ್ಕೆ ಸ್ಥಳೀಯರಾದ ಪ್ರಮೀಳಾ ಮತ್ತು ಲಕ್ಷ್ಮೀ ಸಾರಥಿಯರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ರಾಜ್ಯದ ಪ್ರತಿ ಗ್ರಾ.ಪಂ.ವ್ಯಾಪ್ತಿಯಲ್ಲೂ ಸ್ವಚ್ಛ ಸಂಕೀರ್ಣವನ್ನು ನಿರ್ಮಿಸಿ ವಾಹನದ ಮೂಲಕ ತ್ಯಾಜ್ಯ ಸಂಗ್ರಹಣಾ ಕಾರ್ಯ ಕಡ್ಡಾಯಗೊಳಿಸಲಾಗುತ್ತಿದ್ದು, ಬಹುತೇಕ ಗ್ರಾ.ಪಂ.ಗಳಲ್ಲಿ ಈ ಕಾರ್ಯ ಈಗಾಗಲೇ ಅನುಷ್ಠಾನಗೊಂಡಿದೆ. ದ.ಕ.ಜಿಲ್ಲೆಯಲ್ಲಿ ವಿವಿಧ ಮಹಿಳಾ ಒಕ್ಕೂಟಗಳು ಈ ಕಾರ್ಯವನ್ನು ಮಾಡುತ್ತಿದ್ದು, ಆದರೆ ಮಹಿಳೆಯರೇ ವಾಹನ ಚಲಾಯಿಸುತ್ತಿರುವುದು ಇದು ಮೊದಲ ಪ್ರಯೋಗ.
ಕಡೇಶ್ವಾಲ್ಯ ಗ್ರಾ.ಪಂ. ಹಾಗೂ ಅಲ್ಲಿನ ಮಾತೃ ಸಂಜೀವಿನಿ ಒಕ್ಕೂಟವು ಸ್ವಚ್ಛ ಸಂಕೀರ್ಣ ಘಟಕವನ್ನು ನಿರ್ವಹಿಸುವ ಕುರಿತು ಒಡಂಬಡಿಕೆ ಮಾಡಿಕೊಂಡಿದ್ದು, ಪ್ರಾಯೋಗಿಕ ಕಾರ್ಯಾಚರಣೆ ಆರಂಭಗೊಂಡಿದೆ. ಆರಂಭದ ಹಂತದಲ್ಲಿ ಒಕ್ಕೂಟಕ್ಕೆ ಗ್ರಾ.ಪಂ.ನಿಂದ ತಿಂಗಳಿಗೆ 30 ಸಾವಿರ ರೂ.ಗಳಂತೆ ನೀಡಲಾಗುತ್ತದೆ. ಜತೆಗೆ ತ್ಯಾಜ್ಯ ಸಂಗ್ರಹದ ಕುರಿತು ಶುಲ್ಕ ಸಂಗ್ರಹದ ಕಾರ್ಯವನ್ನೂ ಒಕ್ಕೂಟವೇ ಮಾಡಲಿದೆ. ಸ್ವ ಇಚ್ಛೆಯಿಂದ ಈ ಕಾರ್ಯದಲ್ಲಿ ತೊಡಗಿದ್ದು, ಪ್ರಸ್ತುತ ಬೆಳಗ್ಗೆ 9.30ರಿಂದ ಮಧ್ಯಾಹ್ನ 2ರ ವರೆಗೆ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಪ್ರಸ್ತುತ ನಾವು ಇಬ್ಬರು ಚಾಲಕಿಯರು ಸೇರಿ ಒಟ್ಟು 4 ಮಂದಿ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ತ್ಯಾಜ್ಯ ಸಂಗ್ರಹಣಾ ವಾಹನ ಚಾಲನೆ ಯಾವುದೇ ರೀತಿಯಲ್ಲಿ ಕಷ್ಟ ಎನಿಸದೆ ಈ ವೃತ್ತಿ ತೃಪ್ತಿ ನೀಡಿದೆ ಎಂದು ಚಾಲಕಿಯರಾದ ಪ್ರಮೀಳಾ ಹಾಗೂ ಲಕ್ಷ್ಮೀ.
Kshetra Samachara
12/11/2021 05:38 pm