ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

18 ರಂದು ಅಳಿಕೆಯಲ್ಲಿ ಹಿರಿಯರ ಸಮಾವೇಶ, ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಉದ್ಘಾಟನೆ

ಬಂಟ್ವಾಳ: ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ಉದ್ಘಾಟನೆ ಮತ್ತು ಹಿರಿಯರ ಸಮಾವೇಶ ಡಿ.18 ರಂದು ಬೆಳಗ್ಗೆ ಗಂಟೆ 930ಕ್ಕೆ ಅಳಿಕೆ ಶ್ರೀ ಸತ್ಯಸಾಯಿ ವಿಹಾರದಲ್ಲಿ ನಡೆಯಲಿದೆ ಎಂದು ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಹೇಳಿದರು.

ಸಮಾವೇಶವನ್ನು ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಉದ್ಘಾಟಿಸಲಿದ್ದು, ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡುತ್ತಾರೆ. ಕರ್ನಾಟಕ ಲೋಕ ಸೇವಾ ಆಯೋಗದ ಮಾಜಿ ಅಧ್ಯಕ್ಷ ಟಿ.ಶ್ಯಾಮ ಭಟ್ ಅಧ್ಯಕ್ಷತೆ ವಹಿಸುತ್ತಾರೆ.

ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಟ್ರಸ್ಟ್ ಮೆನೇಜಿಂಗ್ ಟ್ರಸ್ಟಿ ಕೆ.ಎಸ್.ಕೃಷ್ಣ ಭಟ್, ಬಿ.ವಿಟ್ಠಲ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ. ಕಜಂಪಾಡಿ ಸುಬ್ರಹ್ಮಣ್ಯ ಭಟ್ ವಿಶೇಷ ಉಪನ್ಯಾಸ ನೀಡಲಿದ್ದು, ಆಶ್ರಮಗಳನ್ನು ಸ್ಥಾಪಿಸಿದ ಡಾ.ಗೌರಿ ಎಂ.ಪೈ, ಎಸ್.ಈಶ್ವರ ಭಟ್, ಡಾ.ಉದಯ ಕುಮಾರ್ ಭಟ್ ಅವರನ್ನು ಸಮ್ಮಾನಿಸಲಾಗುವುದು ಎಂದು ವಿಟ್ಲ ಪ್ರೆಸ್ ಕ್ಲಬ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಗೌರವಾಧ್ಯಕ್ಷ ಪ್ರೊ.ಎ.ವಿ.ನಾರಾಯಣ, ಅಧ್ಯಕ್ಷ ನಾರಾಯಣ ಭಟ್, ಕಾನ ಈಶ್ವರ ಭಟ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

16/12/2021 04:06 pm

Cinque Terre

1.27 K

Cinque Terre

0

ಸಂಬಂಧಿತ ಸುದ್ದಿ