ಬಜಪೆ:ವಿಶ್ವ ಹಿಂದೂ ಪರಿಷತ್, ಬಜರಂಗದಳ, ಆಂಜನೇಯ ಶಾಖೆ, ಭವಂತಿಬೆಟ್ಟು ಮಳಲಿ ಹಾಗೂ ಜವನೆರ್ ಮಣೇಲ್ ಮತ್ತು ಯುವಶಕ್ತಿ ಕಾಜಿಲ ನೇತೃತ್ವದಲ್ಲಿ ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಹಯೋಗದಲ್ಲಿ ಬೃಹತ್ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮವು ಇಂದು ಮಳಲಿ ಶಾಲಾ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅವರು ಅಂಗಾಂಗ ದಾನದ ಮಹತ್ವ ವಿವರಿಸಿ ಇಂತಹ ಮಾದರಿ ಕಾರ್ಯ ಮಾಡುತ್ತಿರುವ ಸಂಘಟನೆಗಳ ಶ್ರಮವನ್ನು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಅಶಕ್ತರಿಗೆ, ನೊಂದವರಿಗೆ ವಿವಿಧ ರೀತಿಯ ನೆರವನ್ನು ನೀಡುತ್ತಾ ಸಮಾಜಮುಖಿ ಕಾರ್ಯ ಮಾಡುತ್ತಿರುವ ಸಂಘಟನೆಗಳ ಪ್ರಮುಖರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ, ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
Kshetra Samachara
30/01/2022 05:10 pm