ಶಿರ್ವ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೃಷಿಕ ಶಿರ್ವದ ಕಲ್ಲೊಟ್ಟು ರಾಘವೇಂದ್ರ ನಾಯಕ್ (53) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು. ಅವರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಕೃಷಿಕರಿಗೆ ಕೃಷಿ ಮಾಹಿತಿ ನೀಡುತ್ತಿದ್ದ ರಾಘವೇಂದ್ರ ನಾಯಕ್ ಕೃಷಿ ಕ್ಷೇತ್ರದ ಸಾಧನೆಗಾಗಿ ಅನೇಕ ಸಂಘ ಸಂಸ್ಥೆಗಳಿಂದ ಸನ್ಮಾನ, ಅಭಿನಂದನೆಗಳನ್ನು ಪಡೆದಿದ್ದರು.
Kshetra Samachara
24/03/2022 09:35 pm