ಬ್ರಹ್ಮಾವರ: 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪೇಜಾವರ ಶ್ರೀ ವಿಶ್ವೇಶತೀರ್ಥ ಸ್ಮರಣಾರ್ಥ ಸ್ಮೃತಿ ವನದ ಶಂಕುಸ್ಥಾಪನೆ ಕಾರ್ಯಕ್ರಮವು ನೀಲಾವರ ಗ್ರಾಮದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಅರಣ್ಯ ಸಚಿವ ಉಮೇಶ್ ಕತ್ತಿ ಶಂಕುಸ್ಥಾಪನೆ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಅರಣ್ಯಮಂತ್ರಿ ಉಮೇಶ್ ಕತ್ತಿ, ಉಡುಪಿ ಶಾಸಕ ರಘುಪತಿ ಭಟ್, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ ರಾಜ್ಯ ಮಂತ್ರಿ ಶೋಭಾ ಕರಂದ್ಲಾಜೆ, ಸಚಿವರಾದ ಎಸ್. ಅಂಗಾರ, ಕೋಟ ಶ್ರೀನಿವಾಸ್ ಪೂಜಾರಿ, ಇನ್ನಿತರರು ಉಪಸ್ಥಿತರಿದ್ದರು.
Kshetra Samachara
07/05/2022 02:06 pm