ಬಂಟ್ವಾಳ: ಕಾವಳಮೂಡೂರು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಮೇಲ್ಭಾಗದಿಂದ ಬೃಹತ್ ಬಂಡೆಕಲ್ಲೊಂದು ಉರುಳಿ ಬಿದ್ದ ಘಟನೆ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಗುರುವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಕಾರಿಂಜ ಕ್ಷೇತ್ರದ ಅಭಿವೃದ್ದಿ ಕುರಿತಾಗಿ ಅಷ್ಟಮಂಗಳ ಪ್ರಶ್ನಾ ಚಿಂತನೆ ಬಳಿಕ ಯೋಜನೆ ರೂಪಿಸಲಾಗುವುದು ಎಂದ ಅವರು, ಮುಂದಕ್ಕೆ ದೇವಸ್ಥಾನಕ್ಕೆ ಯಾವುದೇ ಅಪಾಯವಾಗದಂತೆ ಎನ್‌ಐಟಿಕೆ ತಜ್ಞರಿಂದ ಸಲಹೆ ಪಡೆಯಲಾಗುವುದು ಎಂದರು. ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಗ್ರಾಮಣಿ ವೆಂಕಟರಮಣ ಮುಚ್ಚಿನ್ನಾಯ, ಗ್ರಾ.ಪಂ. ಉಪಾಧ್ಯಕ್ಷ ಅಜಿತ್ ಶೆಟ್ಟಿ ಕಾರಿಂಜ, ತಹಶೀಲ್ದಾರ್ ಡಾ. ಸ್ಮಿತಾ ರಾಮು, ಗ್ರಾಮ ಕರಣಿಕೆ ಆಶಾ ಮೆಹಂದಳೆ, ವ್ಯವಸ್ಥಾಪನ ಸದಸ್ಯರು ಉಪಸ್ಥಿತರಿದ್ದರು.
Kshetra Samachara
19/05/2022 10:05 pm