ಉಡುಪಿ: ಬಿಜೆಪಿ ಹಿರಿಯ ನಾಯಕ, ರಾಜ್ಯದ ಮೂರನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ. ಕೊಡ್ಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತಾಲ್ಲೂಕು ಬೋರ್ಡ್ ಅಧ್ಯಕ್ಷರಾಗಿ ರಾಜಕೀಯ ಜೀವನ ಪ್ರಾರಂಭಿಸಿದ ಕೊಡ್ಗಿ ಅವರು ಬೈಂದೂರು ಶಾಸಕರಾಗಿ, ನಂತರ ಹಣಕಾಸು ಆಯೋಗದ ಅಧ್ಯಕ್ಷರಾಗಿ ಸಲ್ಲಿಸಿದ ಸೇವೆ ಅನನ್ಯವಾದುದು. ಅವರ ರಾಜಕೀಯ ಜೀವನವೂ ಇತರರಿಗೆ ಮಾದರಿಯಾಗಿತ್ತು. ಪಕ್ಷದಲ್ಲಿ ಕರಾವಳಿ ಭಾಗದಲ್ಲಿ ಹಲವು ಯುವ ನಾಯಕರನ್ನು ಪ್ರೋತ್ಸಾಹಿಸಿ ಬೆಳೆಸಿದ ಶ್ರೇಯ ಇವರದು ಎಂದು ಮುಖ್ಯಮಂತ್ರಿಗಳು ಸ್ಮರಿಸಿದ್ದಾರೆ.
ಅವರ ನಿಧನದಿಂದ ಒಬ್ಬ ಸರಳ, ಸಜ್ಜನ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Kshetra Samachara
13/06/2022 07:51 pm