ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಗಾಂಜಾ ಅಮಲಲ್ಲಿ ಸಾರ್ವಜನಿಕರಿಗೆ ತೊಂದರೆ: ಆರೋಪಿ ಬಂಧಿಸಿದ ಪೊಲೀಸರು

ಬಂಟ್ವಾಳ: ಗಾಂಜಾ ಸೇವಿಸಿ ಸಾರ್ವಜನಿಕ ಶಾಂತಿಭಂಗ ಮಾಡುತ್ತಿದ್ದ ಆರೋಪದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆ ಎಸ್.ಐ. ಎಂ.ಆರ್.ಹರೀಶ್ ನೇತೃತ್ವದಲ್ಲಿ ಪೊಲೀಸರು ಸಜಿಪನಡು ಗ್ರಾಮದ ಕುಂಟಾಲುಗುಡ್ಡೆ ನಿವಾಸಿ ಮೊಹಮ್ಮದ್ ಜಾಫರ್ (34) ಎಂಬಾತನನ್ನು ವಶಕ್ಕೆ ತೆಗೆದುಕೊಂಡ ಘಟನೆ ಬುಧವಾರ ರಾತ್ರಿ ನಡೆದಿದೆ.

ಸಜೀಪ ಜಂಕ್ಷನ್‌ ಬಳಿ ಸಾರ್ವಜನಿಕ ಸ್ಥಳದಲ್ಲಿ ಒಬ್ಬಾತ ಯಾವುದೋ ಮಾಧಕ ವಸ್ತುವನ್ನು ಸೇವಿಸಿ ನಶೆ ಹೊಂದಿ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬುವುದಾಗಿ ದೊರೆತ ಮಾಹಿತಿ ಮೇರೆಗೆ ಎಸ್.ಐ. ಹರೀಶ್ ಸಿಬಂದಿಯೊಂದಿಗೆ ರಾತ್ರಿ 8.30 ಗಂಟೆಗೆ ಅಲ್ಲಿಗೆ ತಲುಪಿದಾಗ ನಶೆಯ ಅಮಲಿನಲ್ಲಿದ್ದ ವ್ಯಕ್ತಿಯನ್ನು ವಿಚಾರಿಸಿದಾಗ ಮಾಧಕ ವಸ್ತು ಗಾಂಜಾ ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದು, ಬಳಿಕ ಆತನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ದೃಢವಾಯಿತು.

Edited By : PublicNext Desk
Kshetra Samachara

Kshetra Samachara

16/06/2022 07:55 am

Cinque Terre

10.12 K

Cinque Terre

0

ಸಂಬಂಧಿತ ಸುದ್ದಿ