ಮಂಗಳೂರು:ಅಡ್ಯಾರ್ ಗ್ರಾಮ ಪಂಚಾಯತ್ ನಲ್ಲಿ ಸಾರ್ವಜನಿಕ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಉದ್ಘಾಟನೆ ಮತ್ತು ವಸತಿ ಯೋಜನೆಯ ಫಲಾನುಭವಿಗಳಿಗೆ ದಾಖಲೆಪತ್ರ ನೀಡುವ ಕಾರ್ಯಕ್ರಮ ಶನಿವಾರ ನಡೆಯಿತು. ಡಿಜಿಟಲ್ ಲೈಬ್ರರಿಯನ್ನು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಉದ್ಘಾಟಿಸಿ ವಸತಿ ಯೋಜನೆಯ ಫಲಾನುಭವಿಗಳಿಗೆ ದಾಖಲೆಪತ್ರಗಳನ್ನು ವಿತರಿಸಿದರು.
ಈ ಸಂದರ್ಭ ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಝೀನತ್, ಉಪಾಧ್ಯಕ್ಷೆ ಶ್ರೀಮತಿ ಎಮಿಲ್ಡಾ ಪಿಂಟೋ ಹಾಗೂ ಪಂಚಾಯತ್ ಸದಸ್ಯರು. ಗ್ರಾಮ ಕರಣಿಕರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಪಸ್ಥಿತರಿದ್ದರು.
Kshetra Samachara
18/06/2022 03:51 pm