ಬಜಪೆ:ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಂಕದಕಟ್ಟೆಯ ಅಂಬಿಕಾನಗರ ಎಂಬಲ್ಲಿ ರಾಜ್ಯ ಹೆದ್ದಾರಿಯ ಅಂಚಿನಲ್ಲಿ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದಾಗಿ ಮಳೆಯ ನೀರು ಚರಂಡಿಯಲ್ಲಿ ಹರಿದುಹೋಗದೆ ರಸ್ತೆಯ ಅಂಚಿನಲ್ಲಿ ಸಂಗ್ರಹವಾಗುತ್ತಿದ್ದು,ಇದರಿಂದಾಗಿ ರಸ್ತೆಯಲ್ಲಿ ಸಂಚರಿಸುವಂತಹ ವಾಹನ ಸವಾರರು ತೊಂದರೆಯನ್ನು ಅನುಭವಿಸುತ್ತಿದ್ದರು.
ಇದನ್ನು ಗಮನಿಸಿದ ಜೈಹಿಂದ್ ಫ್ರೆಂಡ್ಸ್ ನ ವತಿಯಿಂದ ಸರ್ವಸದಸ್ಯರು ಸೇರಿ ಮಳೆ ನೀರು ಹರಿದು ಹೋಗಲು ತಾತ್ಕಲೀಕ ವ್ಯವಸ್ಥೆಯನ್ನು ಕಲ್ಪಿಸಿದರು.
Kshetra Samachara
22/07/2022 10:44 am