ಮಂಗಳೂರು: ಹಿರಿಯ ನಾಟಕಕಾರ, ನಿರ್ದೇಶಕ, ವಜ್ರನೇತ್ರ ಪತ್ರಿಕೆ ಸಂಪಾದಕ 'ನಾಟಕ ಕಲಾರತ್ನ' ರತ್ನಾಕರ ರಾವ್ ಕಾವೂರು (81) ಇಂದು ಸ್ವಗೃಹದಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.
ಸಾಮಾಜಿಕ, ಪೌರಾಣಿಕ, ಆಧ್ಯಾತ್ಮಿಕ, ನವ್ಯ ಮತ್ತು ಐತಿಹಾಸಿಕ ನಾಟಕ ರಚನೆಯಲ್ಲಿ ಅವರದ್ದು ಗಮನಾರ್ಹ ಸಾಧನೆ. 'ನಾಟಕ ಕಲಾ ರತ್ನ' ಬಿರುದಾಂಕಿತ ರತ್ನಾಕರ ರಾವ್ ಕಾವೂರು ಅವರು, 'ಅಮ್ಮಾ ಕಟೀಲಮ್ಮಾ', ತಬುರನ ತೆಲಿಕೆ, ಹಸುರು ಹೆಣ್ಣು, ಸಾಮ್ರಾಟ್ ಸಂಕಣ್ಣೆ, ಶ್ರೀ ಗುರುರಾಘವೇಂದ್ರ, ನಳದಮಯಂತಿ, ಅಮರ ನಾರಿ ಅಬ್ಬಕ್ಕ, ಕನಕನ ಕೃಷ್ಣ, ಕತ್ತಿ ಪತ್ತಿ ಕಲ್ಯಾಣಪ್ಪೆ, ಮಿನಿಸ್ಟರ್ ಮುಂಡಪ್ಪಣ್ಣೆ, ಅಬ್ಬರದ ಆದಿಶಕ್ತಿ, ಕಾರ್ನಿಕದ ಕೋಟಿಚೆನ್ನಯೆ, ತುಳುನಾಡ ಸಿರಿ ನಾಗಬ್ರಹ್ಮೆ ಮುಂತಾದ 64 ತುಳು ನಾಟಕಗಳು ಹಾಗೂ 39 ಕನ್ನಡ ನಾಟಕಗಳನ್ನು ರಚಿಸಿದ್ದಾರೆ. 'ನ್ಯಾಯೊಗಾದ್ ಎನ್ನ ಬದ್‌ಕ್' ಬಂಗಾರ್ ಪಟ್ಲೇರ್ ಮುಂತಾದ ಸಿನೆಮಾದಲ್ಲೂ ಬಣ್ಣ ಹಚ್ಚಿದ ಅವರಿಗೆ ಇತ್ತೀಚೆಗೆ ತುಳು ಸಾಹಿತ್ಯ ಅಕಾಡೆಮಿಯ ಜೀವಮಾನ ಸಾಧನೆಯ ಗೌರವ ಲಭಿಸಿತ್ತು.
ರತ್ನಾಕರ ರಾವ್ ಕಾವೂರು ಅವರು ಪತ್ನಿ ಜಯಂತಿ ರಾವ್ ಕೆ, ಮಕ್ಕಳಾದ ಪ್ರಾಧ್ಯಾಪಿಕೆ ಡಾ.ಸುಮಂಗಲ ರಾವ್, ಪತ್ರಕರ್ತ ರಜನ್ ಕುಮಾರ್, ನ್ಯಾಯವಾದಿ ಶಶಿರಾಜ್ ಕಾವೂರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
Kshetra Samachara
22/07/2022 08:29 pm