ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು : ಶಿರೂರು ಟೋಲ್ ಗೇಟ್ ಬಳಿ ಸಾರ್ವಜನಿಕರ ಪ್ರತಿಭಟನೆ

ಬೈಂದೂರು : ಬೈಂದೂರು ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಖಂಡಿಸಿ ಶಿರೂರು ಗ್ರಾಮ ಪಂಚಾಯತ್ ಮುಂದಾಳತ್ವದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯ ವೇಳೆ ಐ ಆರ್ ಬಿ ಅಧಿಕಾರಿಗಳು ಮತ್ತು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆದಿದ್ದು

ಸ್ಥಳೀಯರ ಬೇಡಿಕೆಗಳಿಗೆ ಹೆದ್ದಾರಿ ಪ್ರಾಧಿಕಾರ ಮತ್ತು ಐ ಆರ್ ಬಿ ಕಂಪನಿಯಿಂದ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ಪ್ರತಿಭಟನಕಾರರ ನಡುವೆ ಮಾತಿನ ಜಟಾಪಟಿ ಬೆಳೆಯಿತು.

ಐ ಆರ್ ಬಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸ ಬೇಕೆಂದು ಪುಟ್ಟು ಹಿಡಿದ ಹಿನ್ನೆಲೆಯಲ್ಲಿ ಸಮಾಧಾನಗೊಳ್ಳದ ಪ್ರತಿಭಟನಾಕಾರರು ಇವರಿಗೆ ಹಲವು ಬಾರಿ ಮನವಿ ಮಾಡಿದರು ಯಾವುದೇ ಸ್ಪಂದನೆ ನೀಡದಿದ್ದು ಸಾರ್ವಜನಿಕರ ಕೋಪಕ್ಕೆ ತುತ್ತಾಗಿದ್ದು, ಈ ಬಾರಿ ಸಮರ್ಪಕವಾದ ಸ್ಪಂದನೆ ಲಿಖಿತ ರೂಪದಲ್ಲಿ ನೀಡಬೇಕು ಎಂದು ಮನವಿ ಮಾಡಿದರು,.

ಬೈಂದೂರು ಮಾಜಿ ಶಾಸಕ ಕೆ ಗೋಪಾಲ್ ಪೂಜಾರಿ ಮಾತನಾಡಿ ;ಚತುಷ್ಪಥ ಕಾಮಗಾರಿ ಆರಂಭದಿಂದಲೂ ಸಮಸ್ಯೆಗಳಿಂದ ಕೂಡಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ನಿತ್ಯ ಅಪಘಾತ ನಡೆಯುತ್ತಿದೆ. ಬೀದಿ ದೀಪ ದುರಸ್ತಿಯಾಗಿಲ್ಲ ಸರ್ವಿಸ್ ರಸ್ತೆ ಬೇಡಿಕೆ ಇದುವರೆಗೂ ಈಡೇರಿಸಿಲ್ಲ ಮಳೆಗಾಲದಲ್ಲಿ ರಸ್ತೆಯಲ್ಲಿ ನೀರು ನಿಲ್ಲುವ ಪರಿಣಾಮ ಅಪಘಾತ ಸಂಖ್ಯೆ ಹೆಚ್ಚುತ್ತಿದ್ದು ಹಲವು ಬಾರಿ ಮನವಿ ಮಾಡಿದರು ಕೂಡ ಕಂಪನಿ ಅಥವಾ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಮ್ಮ ಬೇಡಿಕೆಗೆ ಕಿಂಚಿತು ಬೆಲೆ ನೀಡುತ್ತಿಲ್ಲ ಜನರ ಬೇಡಿಕೆ ಶೀಘ್ರ ಈಡೇರಿಸದಿದ್ದಲ್ಲಿ ಮುಂದಿನ ದಿನದಲ್ಲಿ ಸರಣಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಬೈಂದೂರು ಕ್ಷೇತ್ರ ಬಿಜೆಪಿ ಮಂಡಲದ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ ;ಬೈಂದೂರು ಕ್ಷೇತ್ರದ ಹೆದ್ದಾರಿ ಸಮಸ್ಯೆ ಕುರಿತು ಹಲವು ಬಾರಿ ಮನವಿ ಮಾಡಿದ್ದು ,ಹೆದ್ದಾರಿ ಸಮಸ್ಯೆಯನ್ನು ಸರಿಪಡಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದರು.

ಈ ಸಂದರ್ಭದಲ್ಲಿ ಬೈಂದೂರು ತಹಶೀಲ್ದಾರ ಕಿರಣ್ ಗೋರೆಯ್ಯ ,ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಂಜಿನಿಯರ್ ನವೀನ್ ಐ ಆರ್ ಬಿಅಧಿಕಾರಿ ಶ್ರೀನಿವಾಸ್, ಟೋಲ್ ಜನರಲ್ ಮ್ಯಾನೇಜರ್ ಗಂಗಾಧರ್ ಪಾಯ್ಕ್, ಕುಂದಾಪುರ ಡಿ ವೈ ಎಸ್ ಪಿ ಶ್ರೀಕಾಂತ್ ಬೈಂದೂರು ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣೆ, ಠಾಣಾಧಿಕಾರಿ ಪವನ್ ನಾಯಕ್ ಜಿಲ್ಲಾ ಪಂಚಾಯತ್ ಸದಸ್ಯ ಎಸ್ ರಾಜು ಪೂಜಾರಿ, ಕಾಂಗ್ರೆಸ್ಸಿನ ಮುಖಂಡ ಮದನ್ ಕುಮಾರ್, ಗ್ರಾಮ ಪಂಚಾಯತ್ ಸದಸ್ಯರು, ಪೊಲೀಸ್ ಇಲಾಖೆ ಸಿಬ್ಬಂದಿಗಳು ಉಪಸಿತರಿದ್ದರು.

Edited By : PublicNext Desk
Kshetra Samachara

Kshetra Samachara

31/07/2022 08:38 am

Cinque Terre

4.58 K

Cinque Terre

0

ಸಂಬಂಧಿತ ಸುದ್ದಿ