ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಪ್ಲಾಸ್ಟಿಕ್ ಧ್ವಜ ಬಳಕೆಗೆ ಹಿಂದೂ ಜನಜಾಗೃತಿ ಸಮಿತಿ ವಿರೋಧ

ಕಾರ್ಕಳ: ಸ್ವಾತಂತ್ರ್ಯ ದಿನದಂದು ಪ್ಲಾಸ್ಟಿಕ್‌ನ ಸಣ್ಣ ಸಣ್ಣ ರಾಷ್ಟ್ರಧ್ವಜಗಳನ್ನು ಬಳಸಿ ಬಳಿಕ ರಸ್ತೆ, ಕಸ ಮತ್ತು ಚರಂಡಿಗಳಲ್ಲಿ ಎಸೆಯುವವರ ವಿರುದ್ಧ ಕ್ರಮಕ್ಕೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹಿಸಿದೆ.

ಪ್ಲಾಸ್ಟಿಕ್ ಧ್ವಜಗಳ ಬೇಕಾಬಿಟ್ಟಿ ಬಳಸಿ ಎಸೆಯುವುದರಿಂದ ರಾಷ್ಟ್ರ ಧ್ವಜಕ್ಕೆ ಅವಮಾನವಾಗುವುದಲ್ಲದೇ ಪರಿಸರಕ್ಕೂ ಮಾರಕ.ಅದ್ದರಿಂದ ಸರಕಾರದ ಅಧಿನಿಯಮಗಳನ್ನು ಧಿಕ್ಕರಿಸಿ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವ ಮಾರಾಟಗಾರರು ಹಾಗೂ ಧ್ವಜ ಸಂಹಿತೆ ಪಾಲಿಸದೇ ಧ್ವಜಕ್ಕೆ ಅಪಮಾನ ಎಸಗುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಾರ್ಕಳ ತಾಲೂಕು ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಕಾರ್ಕಳ ತಹಸೀಲ್ದಾರ್ ಪ್ರದೀಪ ಕುರ್ಡೆಕರ್ ಹಾಗೂ ಡಿವೈಎಸ್ಪಿ ವಿಜಯಪ್ರಸಾದ್ ಅವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಸದಸ್ಯರಾದ ಸುಂದರ, ವಿಕ್ರಂ ಆಚಾರ್, ಗಣೇಶ್ ಆಚಾರ್, ಸುಕುಮಾರ ಹೆಗ್ಡೆ, ಲಕ್ಷ್ಮೀ ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

31/07/2022 04:53 pm

Cinque Terre

1.81 K

Cinque Terre

0