ಮೂಡುಬಿದಿರೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಪಡೆದಿರುವ, ಇರುವೈಲು ಶ್ರೀ ದುರ್ಗಾಪರಮೇಶ್ವರಿ ಮಹಿಳಾ ಭಜನಾ ಮಂಡಳಿಯ ಸದಸ್ಯೆ ನಂದಿನಿ ಅವರನ್ನು ಭಜನಾ ಮಂಡಳಿಯ ವತಿಯಿಂದ ಇರುವೈಲು ದೇವಸ್ಥಾನದ ಸಭಾಭವನದಲ್ಲಿ ಭಾನುವಾರ ಸನ್ಮಾನಿಸಿ ಗೌರವಿಸಲಾಯಿತು.
ಮೂಡುಬಿದಿರೆ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯೆ ಗೀತಾ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಭಜನೆ ಕಲಿಕೆಗೆ ಪೂರಕ, ಭಜನೆಯಿಂದ ದೇವರ ಮೇಲೆ ಭಕ್ತಿ ಮಾತ್ರವಲ್ಲ ಉತ್ತಮ ವ್ಯಕ್ತಿತ್ವವು ರೂಪುಗೊಳ್ಳುತ್ತದೆ. ಮಹಿಳೆಯರಲ್ಲಿ ಧಾರ್ಮಿಕ ಪ್ರಜ್ಞೆ ಇದ್ದಲ್ಲಿ ಕುಟುಂಬವು ಶಾಂತಿ ನೆಮ್ಮದಿಯಿಂದ ಕೂಡಿರುತ್ತದೆ. ಭಜನೆಯಿಂದ ಕೇವಲ ಧಾರ್ಮಿಕ ಕೇಂದ್ರಗಳಲ್ಲಿ ಮಾತ್ರವಲ್ಲ ಮನೆಯಲ್ಲಿಯೂ ಧಾರ್ಮಿಕ ಪ್ರಜ್ಞೆ ಮೂಡಿಸಲು ಸಾಧ್ಯವಿದೆ' ಎಂದರು.
ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಕಂಬಳದ ಓಟಗಾರ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ, ಭಜನಾ ಮಂಡಳಿಯ ಹಿರಿಯ ಭಜಕರಾದ ಹರಿಪ್ರಸಾದ್ ಶೆಟ್ಟಿ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಕಾರ್ಯದರ್ಶಿ ನಾರಾಯಣ ದೇವಾಡಿಗ ಅತಿಥಿಯಾಗಿ ಭಾಗವಹಿಸಿದ್ದರು. ಭಜನಾ ಮಂಡಳಿಯ ಸದಸ್ಯರಾದ ಪ್ರಭಾಕರ ಆಚಾರ್ಯ, ಕೀರ್ತಿ ಆಚಾರಿ, ಅಶ್ವಥ್, ಹರ್ಷಿತಾ, ನಂದನ್ ಉಪಸ್ಥಿತರಿದ್ದರು.
ಪವಿತ್ರ ಆಚಾರ್ಯ ಸ್ವಾಗತಿಸಿದರು.ಮಹಿಳಾ ಭಜನಾ ಮಂಡಳಿಯ ಅಧ್ಯಕ್ಷೆ ನಿಶಾ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
Kshetra Samachara
01/08/2022 06:19 pm