ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೂಡುಬಿದಿರೆ ತಾಲೂಕು ಮಟ್ಟದ ವಾಲಬಾಲ್‌ ಪಂದ್ಯಾಟಕ್ಕೆ ಚಾಲನೆ

ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿಕಾರಿಗ ಕಛೇರಿ ಮೂಡುಬಿದಿರೆ ಹಾಗೂ ರೋಟರಿ ಅಂಗ್ಲ ಮಾಧ್ಯಮ ಶಾಲೆಯ ಸಹಯೋಗದಲ್ಲಿ ಮಂಗಳವಾರ ರೋಟರಿ ಶಾಲೆಯ ಆವರಣದಲ್ಲಿ ತಾಲೂಕು ಮಟ್ಟದ ವಾಅಬಾಲ್ ಪಂದ್ಯಾಟ ನಡೆಯಿತು.

ಪುರಸಭಾ ಅಧ್ಯಕ್ಷ ಪ್ರಸಾದ್‌ ಕುಮಾರ್‌ ಪಂದ್ಯಾಟಕ್ಕೆ ಚಾಲನೆ ನೀಡಿ ಮಾತನಾಡಿ ಕ್ರೀಡೆ ನಮ್ಮ ಅಂತರಂಗದ ಶಕ್ತಿಯನ್ನು ತೋರಿಸುತ್ತದೆ ಮತ್ತು ನಮ್ಮ ಸಾಮರ್ಥ್ಯವನ್ನು ನಾವೇ ಅರಿತುಕೊಳ್ಳಲು ಸಹಕಾರಿ, ಕ್ರೀಡೆಗಳಲ್ಲಿ ಸೋಲು-ಗೆಲುವು ಅನಿವಾರ್ಯ ಆದ್ದರಿಂದ ಎರಡನ್ನೂ ಸಮಾನ ರೀತಿಯಲ್ಲಿ ಸ್ವೀಕರಿಸಿ ಎಂದು ಸಲಹೆ ನೀಡಿದರು. ರೋಟರಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ನಾರಾಯಣ ಪಿ.ಎಂ, ಅಧ್ಯಕ್ಷತೆಯನ್ನು ವಹಿಸಿದ್ದರು.

ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ರಾಮಕೃಷ್ಣ ಶಿರೂರು, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್ ಎಸ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುನೀಲ್‌ ಮಿರಾಂದ, ರೋಟರಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಮೋಹನ್‌ ಭಟ್, ರೋಟರಿ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಶೀಲಾ ಕಾಂತರಾಜ್, ರೋ.ಸೆಂಟ್ರಲ್ ಶಾಲೆಯ ಪ್ರಾಂಶುಪಾಲೆ ರೂಪಾ ಮಸ್ಕರೇನಸ್ ಅತಿಥಿಗಳಾಗಿ ಭಾಗವಹಿಸಿದ್ದರು.

Edited By : PublicNext Desk
Kshetra Samachara

Kshetra Samachara

23/08/2022 06:38 pm

Cinque Terre

2.04 K

Cinque Terre

0

ಸಂಬಂಧಿತ ಸುದ್ದಿ