ಬಜಪೆಯಿಂದ ಕೈಕಂಬಕ್ಕೆ ಸಾಗುವಂತಹ ರಾಜ್ಯ ಹೆದ್ದಾರಿಯ ಸುಂಕದಕಟ್ಟೆ ಎಂಬಲ್ಲಿ ಹೆದ್ದಾರಿಯಲ್ಲಿಯೇ ಹೊಂಡವೊಂದು ಉಂಟಾಗಿ.ರಸ್ತೆಯಲ್ಲಿ ಸಂಚರಿಸುವಂತಹ ವಾಹನಿಗರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.ಕಳೆದ ಎರಡು ದಿನಗಳಿಂದ ಈ ಭಾಗದಲ್ಲಿ ಮಳೆ ಕೂಡ ಸುರಿಯುತ್ತಿದ್ದು,ಮಳೆ ನೀರು ಹೊಂಡದಲ್ಲಿ ಸಂಗ್ರಹವಾಗಿದೆ.
ಮಳೆ ನೀರು ಹೊಂಡದಲ್ಲಿ ಸಂಗ್ರಹವಾಗಿ ಹೆದ್ದಾರಿಯಲ್ಲಿನ ಹೊಂಡವು ಗೋಚರಿಸದಂತಾಗಿದೆ.ಈ ಬಗ್ಗೆ ಹೆದ್ದಾರಿಯಲ್ಲಿ ಸಂಚರಿಸುವಂತಹ ವಾಹನ ಸವಾರ ರು ಹೆಚ್ಚಿನ ಜಾಗರೂಕತೆಯನ್ನು ವಹಿಸುವುದು ಸೂಕ್ತವಾಗಿದೆ.ಈ ಬಗ್ಗೆ ಸಂಬಂಧಪಟ್ಟ ಹೆದ್ದಾರಿ ಇಲಾಖೆ ಸ್ಪಂದಿಸಿ,ಹೆದ್ದಾರಿಯಲ್ಲಿನ ಹೊಂಡವನ್ನು ಮುಚ್ಚುವ ಕಾರ್ಯ ಮಾಡಬೇಕಿದೆ.
Kshetra Samachara
23/08/2022 09:31 pm