ಕಿನ್ನಿಗೋಳಿ ಸಮೀಪದ ಕೊಡೆತ್ತೂರಿನಲ್ಲಿ 'ಕೊಡೆತ್ತೂರು ಗ್ರಾಮೋತ್ಸವ -2022' ಕಾರ್ಯಕ್ರಮದ ವೇದಿಕೆಯಲ್ಲಿ ಸ್ಥಳೀಯ ಪ್ರತಿಭೆಗಳು ನಡೆಸಿಕೊಟ್ಟ ನೃತ್ಯ ಕಾರ್ಯಕ್ರಮವು ನೆರೆದಿದ್ದ ಎಲ್ಲರ ಗಮನ ಸೆಳೆಯಿತು.ಗ್ರಾಮೋತ್ಸವ ಕಾರ್ಯಕ್ರಮದಲ್ಲಿ ಗ್ರಾಮಸ್ಥರಿಗಾಗಿ ವಿವಿಧ ಬಗೆಯ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಎಲ್ಲಾ ಸ್ಪರ್ಧೆಗಳು ವೇದಿಕೆಯ ಎದುರು ಭಾಗದ ಗದ್ದೆಯಲ್ಲಿ ನಡೆಯಿತು.
ಗದ್ದೆಯಲ್ಲಿ ಮಡಿಕೆ ಒಡೆಯುವ ಸ್ಪರ್ಧೆ,ಹಿಮ್ಮುಖ ಓಟ,ಬಿಂದಿಗೆ ಹಿಡಿದುಕೊಂಡು ಓಟ ಹಾಗೂ ಇನ್ನಿತರ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಸ್ಪರ್ಧೆಯಲ್ಲಿ ವಿಜೇತರಾದವರು ಬಹುಮಾನಗಳನ್ನು ಪಡೆದರು.
Kshetra Samachara
23/08/2022 09:47 pm