ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಂಗ ವೈಭವ -2022: ಆಳ್ವಾಸ್ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಹಾಗೂ ಆಳ್ವಾಸ್ ಕಾಲೇಜು ಮೂಡುಬಿದಿರೆ ಸಂಯುಕ್ತ ಆಶ್ರಯದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ ಕಾಲೇಜು ರಂಗಭೂಮಿ ಸ್ಪರ್ಧೆ `ರಂಗ ವೈಭವ -2022’ ಬುಧವಾರ ಸ್ಕೌಟ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕಕಿ ಡಾ. ಕಿಶೋರಿ ನಾಯಕ್, ರಂಗಕಲೆ, ಸಾಹಿತ್ಯ, ಸಂಗೀತರಹಿತ ಬದುಕು ಕಲ್ಪಿಸಿಕೊಳ್ಳಲು ಅಸಾಧ್ಯ. ಸ್ಪರ್ಧೆಯಲ್ಲಿ ಭಾಗವಹಿಸುವಿಕೆ ಮುಖ್ಯ. ಇದು ವಿವಿಧ ರಂಗಗಳಲ್ಲಿ ಮುಂದುವರಿಯಲು ಅವಕಾಶ ಕಲ್ಪಿಸುತ್ತದೆ. ಸಿಕ್ಕ ಅವಕಾಶದಲ್ಲಿ ಉತ್ತಮವಾದುದನ್ನು ಆಯ್ಕೆ ಮಾಡಿಕೊಂಡು ಉನ್ನತವಾದದ್ದನ್ನು ಸಾಧಿಸಬೇಕು ಎಂದರು. 

ಆಳ್ವಾಸ್ ಕಾಲೇಜಿನ ಆಡಳಿತ ಅಧಿಕಾರಿ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ವಿ  ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಡಾ. ನಾಗಪ್ಪ ಗೌಡ ಆರ್, ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿವಿ ವಿಜ್ಞಾನ ವಿಭಾಗದ ಡೀನ್ ಡಾ. ಮಂಜುನಾಥ ಪಟ್ಟಾಭಿ, ಯಕ್ಷರಂಗಾಯಣ ಹಾಗೂ ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನ್‌ರಾಮ್ ಸುಳ್ಯ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ. ಯೋಗಿಶ್ ಕೈರೋಡಿ ನಿರೂಪಿಸಿ ವಂದಿಸಿದರು.

Edited By : PublicNext Desk
Kshetra Samachara

Kshetra Samachara

24/08/2022 07:39 pm

Cinque Terre

956

Cinque Terre

0

ಸಂಬಂಧಿತ ಸುದ್ದಿ