ಮೂಡುಬಿದಿರೆ: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರ , ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಮಂಗಳೂರು, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಅಂಧತ್ವ ವಿಭಾಗ) ಮಂಗಳೂರು, ಡಾ.ದಯಾನಂದ ಪೈ ಮತ್ತು ಸತೀಶ್ ಪೈ ಚಾರಿಟೇಬಲ್ ಟ್ರಸ್ಟ್ (ರಿ) ಹಾಗೂ ಸೆಂಚುರಿ ಗ್ರೂಪ್ಸ್ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಮಂಗಳವಾರದಂದು ಉಚಿತ ನೇತ್ರ ತಪಸಣಾ ಮತ್ತು ಚಿಕಿತ್ಸಾ ಶಿಬಿರವು ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಂಗಳವಾರ ನಡೆಯಿತು.
ಕಣ್ಣಿನ ತಜ್ಞೆ ಡಾ. ಅರ್ಚನಾ ಮಾತನಾಡಿ ಉಚಿತ ಕಣ್ಣಿನ ತಪಸಣೆಗೆ ಜನರು ಉತ್ತಮವಾಗಿ ಸ್ಪಂದಿಸಿದ್ದು, ಕಣ್ಣಿನ ಪೊರೆ ಸಮಸ್ಯೆ ಆಪರೇಷನ್ ಅವಶ್ಯಕತೆ ಇದ್ದವರಿಗೆ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಯನ್ನು ನೀಡಲಾಗುತ್ತದೆ. ಹಾಗೂ ಕನ್ನಡಕದ ಅವಶ್ಯಕತೆ ಇದ್ದವರಿಗೆ ಕನ್ನಡಕವನ್ನು ವಿತರಣೆ ಮಾಡಲಾಗುತ್ತಿದೆ. ಕಣ್ಣಿನ ಸಮಸ್ಯೆ ಇದ್ದ ಬಡ ಜನರಿಗೆ ಇದರ ಪ್ರಯೋಜನವಾಗಬೇಕೆಂಬ ಉದ್ದೇಶದಿಂದ ಪ್ರಸಾದ್ ನೇತ್ರಾಲಯದಿಂದ ಉಚಿತ ತಪಾಸಣೆ, ಚಿಕಿತ್ಸೆ ಹಾಗೂ ಕನ್ನಡಕ ವಿತರಣೆಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಚಿತ್ರಾ, ಡಾಕ್ಟರ್ ಸೈಯ್ಯದ್ ಹಾಗೂ ಸಿಬ್ಬಂದಿಗಳು, ರೋಗಿಗಳು ಉಚಿತ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದರು.
Kshetra Samachara
06/09/2022 03:30 pm