ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಆಳ್ವಾಸ್ ಪತ್ರಿಕೋದ್ಯಮ ವಿಭಾಗದಲ್ಲಿ ಓಣಂ ಸಂಭ್ರಮ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಸಮೂಹ ಸಂವಹನ ಹಾಗೂ ಪತ್ರಿಕೋದ್ಯಮ ವಿಭಾಗದ ವತಿಯಿಂದ ಓಣಂ ಸಂಭ್ರಮಾಚರಣೆ ಮತ್ತು ಪೂಕಳಂ ಸ್ಪರ್ಧೆಯು ಕಾಲೇಜಿನ ಆವರಣದಲ್ಲಿ ನಡೆಯಿತು.ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಕಾಲೇಜಿನ ಮಲಯಾಳಂ ಭಾಷಾ ವಿಭಾಗದ ಮುಖ್ಯಸ್ಥ ಡಾ. ಶ್ರೀನಾರಾಯಣನ್, ಆಧುನಿಕತೆಯ ಪ್ರಭಾವದಿಂದ ಹಿಂದಿನಿಂದ ಬಂದಂತಹ ಸಂಪ್ರದಾಯಗಳು ಹಾಗೂ ಹಬ್ಬಗಳ ಆಚರಣೆಯಲ್ಲಿ ಬದಲಾವಣೆ ಉಂಟಾಗಿದೆ.

ಓಣಂ ಹಬ್ಬವು ಮಲಯಾಳಿ ಸಮುದಾಯವನ್ನು ಒಗ್ಗೂಡಿಸುವ ಹಬ್ಬ. ಈ ಹಬ್ಬವು ಇಂದು ನಿನ್ನೆಯದ್ದಲ್ಲ, ಪುರಾತನ ಶಾಸನಗಳಲ್ಲಿಯೂ ಇದರ ಉಲ್ಲೇಖವಿದೆ. ವಿದ್ಯಾರ್ಥಿಗಳು ಆಚರಣೆಯ ಮಹತ್ವ ತಿಳಿದುಕೊಳ್ಳುವುದು ಅಗತ್ಯ ಎಂದರು. ಈ ಸಂದರ್ಭ ಓಣಂನ ಆಶಯ ಗೀತೆಯನ್ನು ಹಾಡಿದರು. ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಭಾರತ ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ಅಂತಹ ಏಕತೆಯ ವೈವಿಧ್ಯಮಯ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸಬೇಕು ಎಂದರು.

Edited By : PublicNext Desk
Kshetra Samachara

Kshetra Samachara

07/09/2022 05:25 pm

Cinque Terre

1.56 K

Cinque Terre

0

ಸಂಬಂಧಿತ ಸುದ್ದಿ