ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರೆಡ್ ಕ್ರಾಸ್ ಸೊಸೈಟಿ ಶತಮಾನೋತ್ಸವ ಕಟ್ಟಡ ನಿರ್ಮಾಣಕ್ಕೆ ಬ್ಯಾಂಕ್ ಆಫ್ ಇಂಡಿಯಾದಿಂದ 10 ಲಕ್ಷ ರೂ. ದೇಣಿಗೆ

ಮಂಗಳೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಶತಮಾನೋತ್ಸವ ಭವನ ನಿರ್ಮಾಣ ಕಾಮಗಾರಿಗೆ ಕಾರ್ಪೋರೇಷನ್ ಸಾಮಾಜಿಕ ಜವಾಬ್ದಾರಿ (ಸಿಎಸ್‍ಆರ್) ಯೋಜನೆಯಡಿ ಬ್ಯಾಂಕ್ ಆಫ್ ಇಂಡಿಯಾ 10 ಲಕ್ಷ ರೂ. ಚೆಕ್ ಅನ್ನು ಮಂಗಳವಾರ ನಗರದ ಜಿಪಂ ಮಿನಿ ಸಭಾಂಗಣದಲ್ಲಿ ಹಸ್ತಾಂತರ ಮಾಡಲಾಗಿದೆ. ಬ್ಯಾಂಕ್ ಆಫ್ ಇಂಡಿಯಾದ ಎಂಡಿ ಹಾಗೂ ಸಿಇಒ ಅಟನ್ ಕುಮಾರ್ ದಾಸ್ ಅವರು ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎಸ್. ಶಾಂತರಾಮ ಶೆಟ್ಟಿ ಹಾಗೂ ಉಪಾಧ್ಯಕ್ಷ ಜಿಪಂ ಸಿಇಒ ಡಾ. ಕುಮಾರ್ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಜಿಪಂ ಸಿಇಒ ಡಾ. ಕುಮಾರ್ ಮಾತನಾಡಿ, ಬ್ಯಾಂಕ್ ಆಫ್ ಇಂಡಿಯಾ ಭಾರತೀಯ ರೆಡ್ ಕ್ರಾಸ್ ಸೊಸೈಟಿಗೆ ಅತ್ಯಂತ ಸೂಕ್ತ ಸಮಯದಲ್ಲಿ ಆರ್ಥಿಕ ಸಹಕಾರ ನೀಡುತ್ತಿರುವುದು ಸ್ವಾಗತಾರ್ಹ. ಇದರಿಂದ ಶತಮಾನೋತ್ಸವ ಭವನ ನಿರ್ಮಾಣಕ್ಕೆ ಅನುಕೂಲವಾಗಲಿದೆ.‌ ಈ ಕಾರ್ಯ ಇತರ ಬ್ಯಾಂಕುಗಳಿಗೂ ಮಾದರಿಯಾಗಲಿದೆ ಎಂದರು.

ಬ್ಯಾಂಕ್ ಆಫ್ ಇಂಡಿಯಾದ ಎಂಡಿ ಹಾಗೂ ಸಿಇಒ ಅಟನ್ ಕುಮಾರ್ ದಾಸ್ ಮಾತನಾಡಿ, ಕನ್ನಡಿಗರ ಆತಿಥ್ಯ ಬಹುದೊಡ್ಡದು. ಬ್ಯಾಂಕ್ ಆಫ್ ಇಂಡಿಯಾಕ್ಕೆ 17 ವರ್ಷಗಳಿಂದ ಕರ್ನಾಟಕದೊಂದಿಗೆ ನಂಟು ಇದೆ. ಕಾಪೋರೇಟ್ ಸಾಮಾಜಿಕ ಜವಾಬ್ದಾರಿಯಡಿ ಇಂಡಿಯನ್ ಬ್ಯಾಂಕ್‍ನಿಂದ ಈ ರೀತಿಯ ಸೇವೆ ಸಲ್ಲಿಸುವುದು ವೈಯ್ಯಕ್ತಿಕವಾಗಿ ಹಾಗೂ ಬ್ಯಾಂಕ್ ಪರವಾಗಿ ಅತೀವ ಸಂತೃಪ್ತಿ ತಂದಿದೆ. ಮುಂಬೈನಲ್ಲೂ ಕೂಡ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಬ್ಯಾಂಕ್‍ನಿಂದ ಮಾಡಲಾಗಿದೆ ಎಂದರು.

Edited By : Nirmala Aralikatti
Kshetra Samachara

Kshetra Samachara

13/09/2022 07:27 pm

Cinque Terre

2.84 K

Cinque Terre

0

ಸಂಬಂಧಿತ ಸುದ್ದಿ