ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವ್ಯಸನಕ್ಕೆ ದಾಸರಾಗಿರುವ ವ್ಯಕ್ತಿಗಳಿಗೆ ಧೈರ್ಯ ತುಂಬಿ ಮನ ಪರಿವರ್ತನೆ ಮಾಡಿ-ಡಾ. ದೀಕ್ಷಾ ಶೆಣೈ

ಮೂಡುಬಿದಿರೆ : ಮಾದಕ ದ್ರವ್ಯ ಸೇವನೆ, ಮಾದಕ ವ್ಯಸನ ಈ ಸಮಾಜಕ್ಕೆ ಅಂಟಿಕೊಂಡಿರುವ ಕೆಟ್ಟ ರೋಗ. ಈ ದುಶ್ಚಟಕ್ಕೆ ದೊಡ್ಡ ದೊಡ್ಡ ನಗರಗಳಲ್ಲಿ ಸಣ್ಣ ಸಣ್ಣ ಮಕ್ಕಳಿಂದ ಹಿಡಿದು ಅತೀ ವೃದ್ಧರು ಕೂಡ ಬಲಿಯಾಗುವ ಮೂಲಕ ಇದು ರಾಷ್ಟ್ರೀಯ ಸಮಸ್ಯೆಯಾಗಿ ತಲೆದೂರಿದೆ. ಇಂತಹ ವ್ಯಸನಕ್ಕೆ ದಾಸರಾಗಿರುವ ವ್ಯಕ್ತಿಗಳಿಗೆ ಧೈರ್ಯ ತುಂಬಿ ಮನ ಪರಿವರ್ತನೆ ಮಾಡಬೇಕು, ವ್ಯಸನ ಮುಕ್ತ ಕೇಂದ್ರಗಳಿಗೆ ಸೇರಿಸಿ ಮಾನಸಿಕ ವಿಧಾನದಿಂದ ಚಿಕಿತ್ಸೆ ಕೊಡಿಸುವ ಮೂಲಕ ಮಾದಕ ವ್ಯಸನ ಚಕ್ರವ್ಯೂಹದಿಂದ ಹೊರ ತನ್ನಿ, ವಿದ್ಯಾರ್ಥಿಗಳು ಮಾದಕ ವ್ಯಸನಗಳಗೆ ಬಾಗಿಲು ತೆರೆಯದೆ ಜಾಗೃತರಾಗಿರಿ ಎಂದು ಆಳ್ವಾಸ್‌ನ ಪ್ರಕೃತಿ - ಯೋಗ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ದೀಕ್ಷಾ ಶೆಣೈ ವಿದ್ಯಾರ್ಥಿಗ ಗೆ ಸಲಹೆ ನೀಡಿದರು.

ಅವರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಪುತ್ತಿಗೆ ವಲಯ ಹಾಗೂ ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್‌ ಇವುಗಳ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಬಂಗಬೆಟ್ಟು ಇಲ್ಲಿ ಮಂಗಳವಾರ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತ ನಾಡಿದರು.

ಕಾಲೇಜಿನ ಪ್ರಾಂಶುಪಾಲ ಚಂದ್ರು, ಎಮ್.ಎನ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಯೋಜನಾಧಿಕಾರಿ ನಾರಾಯಣ ಶೆಟ್ಟಿ ,ಕರ್ನಾಟಕ ಜನಜಾಗೃತಿ ವೇದಿಕೆಯ ಸದಸ್ಯ ದಿನೇಶ್ ಆನಡ್ಕ, ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ಟೌನ್‌ನ ಕಾರ್ಯಕ್ರಮ ಸಂಯೋಜಕ ಹರೀಶ್‌ ಎಂ.ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ಲೊಲಿಟಾ ಪಾಯಸ್, ರೋಟರಿ ಕ್ಲಬ್ ಆಫ್ ಮೂಡುಬಿದಿರೆ ಟೆಂಪಲ್ ನ್‌ನ ಕಾರ್ಯದರ್ಶಿ ಡಾ| ಅಮರ್ ದೀಪ್, ಶಂಕರ್ ಕೋಟ್ಯಾನ್‌, ವಿಠಲ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

20/09/2022 06:40 pm

Cinque Terre

2.2 K

Cinque Terre

0

ಸಂಬಂಧಿತ ಸುದ್ದಿ