ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಮೂಡುಬಿದಿರೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ (ರಿ) ಧರ್ಮಸ್ಥಳ ಹಾಗೂ ಶ್ರೀ ಮಹಾವೀರ ಕಾಲೇಜು ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ದುಶ್ಚಟ ಮುಕ್ತ ಸಮಾಜಕ್ಕಾಗಿ ಸ್ವಾಸ್ಥ್ಯ ಸಂಕಲ್ಪ" ಕಾರ್ಯಕ್ರಮವು ಮಹಾವೀರ ಕಾಲೇಜಿನಲ್ಲಿ ಬುಧವಾರ ನಡೆಯಿತು.
ಜೈನ ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಮುನಿರಾಜ ರೆಂಜಾಳ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಎಲ್ಲರೂ ನೆಮ್ಮದಿಯಿಂದ ಜೀವನ ಮಾಡಬೇಕಾದರೆ ಆರೋಗ್ಯವಾಗಿರುವುದು ಬಹಳ ಮುಖ್ಯ. ಆರೋಗ್ಯವನ್ನು ಹಾಳು ಮಾಡುತ್ತಿರುವ ದುಶ್ಚಟಗಳಿಗೆ ಯುವ ಪೀಳಿಗೆ ಬಲಿಯಾಗಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತುಗಳನ್ನು ಹೇಳಿದರು.
ಶ್ರೀ ಮಹಾವೀರ ಪ.ಪೂ.ಕಾಲೇಜಿನ ಪ್ರಾಂಶುಪಾಲ ಎಂ.ರಮೇಶ್ ಭಟ್ ಅಧ್ಯಕ್ಷತೆ ವಹಿಸಿದ್ದರು. ಮಹಾವೀರ ಕಾಲೇಜು ಟ್ರಸ್ಟ್ನ ಕಾರ್ಯದರ್ಶಿ ಡಾ.ರಾಧಾಕೃಷ್ಣ ಶೆಟ್ಟಿ, ಮೂಡುಬಿದಿರೆ-ಕಾರ್ಕಳ ತಾಲೂಕಿನ ಜನಜಾಗೃತಿ ವೇದಿಕೆಯ ಅಧ್ಯಕ್ಷ ಸುಭಾಶ್ಚಂದ್ರ ಚೌಟ, ಆಲಂಗಾರಿನ ವಲಯಾಧ್ಯಕ್ಷ ದಿನೇಶ್ ಆನಡ್ಕ, ಮೂಡುಬಿದಿರೆ ವಲಯಾಧ್ಯಕ್ಷ ಜೊಸ್ಸಿ ಮಿನೇಜಸ್, ಕೊಡಂಗಲ್ಲು ಒಕ್ಕೂಟದ ಅಧ್ಯಕ್ಷೆ ಬೇಬಿ ಅತಿಥಿಗಳಾಗಿ ಭಾಗವಹಿಸಿದ್ದರು.
ಉಪನ್ಯಾಸಕಿ ಸರಿತಾ ಸ್ವಾಗತಿಸಿದರು. ತಾಲೂಕು ಯೋಜನಾಧಿಕಾರಿ ನಾರಾಯಣ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು. ಮೇಲ್ವೀಚಾರಕ ವಿಠಲ್ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಮಮತಾ ವಂದಿಸಿದರು.
Kshetra Samachara
22/09/2022 04:02 pm