ಉಳ್ಳಾಲ: ಜಿಲ್ಲಾ ನಾಯಕರನ್ನ ಬಂಧಿಸಿದ ಎನ್ಐಎ ವಿರುದ್ಧ ಎಸ್ ಡಿಪಿಐ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಇಂದು ತೊಕ್ಕೊಟ್ಟಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.ತೊಕ್ಕೊಟ್ಟು ಫ್ಲೈ ಓವರ್ ಕೆಳಗಡೆ ಎಸ್ ಡಿಪಿಐ ನ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ,ರಾಜ್ಯ ಸರಕಾರ ಮತ್ತು ಎನ್ಐಎ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಎಸ್ ಡಿಪಿಐ ಜಿಲ್ಲಾ ಕಾರ್ಯದರ್ಶಿ ಅನ್ವರ್ ಸಾದತ್ ಬಜೆತ್ತೂರು ,ಕ್ಷೇತ್ರ ಅಧ್ಯಕ್ಷರಾದ ಇರ್ಷಾದ್ ಅಜ್ಜಿನಡ್ಕ, ರಾಜ್ಯ ಸಮಿತಿ ಸದಸ್ಯ ಅಕ್ರಂ ಹಸನ್ ಮೊದಲಾದವರು ಪ್ರತಿಭಟನೆಯಲ್ಲಿದ್ದರು.
Kshetra Samachara
24/09/2022 06:53 pm