ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾವಳಿ,ದ.ಕ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ಬಜಪೆ: ಬಜಪೆಯ ಸೈಂಟ್ ಜೋಸೆಫ್ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾವಳಿಯ ಪ್ರಾಥಮಿಕ ಶಾಲಾ ವಿಭಾಗದ ಮತ್ತು ಪ್ರೌಢಶಾಲಾ ವಿಭಾಗ ಬಾಲಕಿಯರ ವಿಭಾಗದಲ್ಲಿ ದ.ಕ ಜಿಲ್ಲಾ ತಂಡ ಪ್ರಥಮ ಸ್ಥಾನಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.ಪ್ರೌಢ ಶಾಲಾ ಬಾಲಕರ ವಿಭಾಗದಲ್ಲಿ ಮೈಸೂರು ಜಿಲ್ಲಾ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.ಅ.14 ರಂದು ರಾಯಚೂರಿನಲ್ಲಿ ರಾಜ್ಯಮಟ್ಟದ ಪಂದ್ಯಗಳು ನಡೆಯಲಿದೆ.

ಈ ಸಂದರ್ಭ ಸೈಂಟ್ ಜೋಸೆಫ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಉಡುಪ,ಪ್ರೌಢಶಾಲಾ ಮುಖ್ಯ ಶಿಕ್ಷಕ ಅಲ್ವಿನ್ ನೊರೊನ್ನಾ,ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್,ಉದ್ಯಮಿ ಕೃಷ್ಣಕಲ್ಲೊಡಿ,ದೈಹಿಕ ಶಿಕ್ಷಕ ಸಂತೋಷ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

30/09/2022 12:11 pm

Cinque Terre

1.34 K

Cinque Terre

0

ಸಂಬಂಧಿತ ಸುದ್ದಿ