ಮಂಗಳೂರು:ಮಂಗಳೂರಿನ ಬ್ರಹ್ಮಶ್ರೀ ನಾರಾಯಣ ಗುರು ವೃತ್ತ ಸಂಪೂರ್ಣ ನವೀಕರಣಗೊಂಡಿದ್ದು, ಗುರುಗಳ ಪುತ್ಥಳಿಯೊಂದಿಗೆ ಅತ್ಯಾಕರ್ಷಕವಾಗಿ ಕಂಗೊಳಿಸುತ್ತಿದೆ.ನವ ನಿರ್ಮಾಣಗೊಂಡಿರುವ ವೃತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಸಂಸದರೂ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಿದರು.
ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಶಾಸಕರುಗಳಾದ ವೇದವ್ಯಾಸ ಕಾಮತ್, ಉಮಾನಾಥ ಕೋಟ್ಯಾನ್, ಮೇಯರ್ ಜಯಾನಂದ ಅಂಚನ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷ ಸಾಯಿರಾಂ, ರವಿಶಂಕರ್ ಮಿಜಾರ್, ಹಾಗೂ ಪ್ರಮುಖರುಗಳು ಉಪಸ್ಥಿತರಿದ್ದರು.
Kshetra Samachara
03/10/2022 08:18 pm