ಮಂಗಳೂರು: ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ನಡೆಯಿತು. ಕೆಎಸ್ ಆರ್ ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ಎಸ್. ಎನ್. ಅರುಣ್ ಎಂಬವರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಬಿಜೈ ಬಳಿ ಇರುವ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಸಮೀಪ ಪ್ರತಿಭಟನಾ ನಿರತರು ಘೋಷಣೆ ಕೂಗಿ, ಧರಣಿ ಸತ್ಯಾಗ್ರಹ ನಡೆಸಿದರು.
ಈ ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
Kshetra Samachara
11/01/2021 01:00 pm