ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಾರೀಸುದಾರರು ಇಲ್ಲದ ಎರಡು ಶವಗಳ ಅಂತ್ಯಸಂಸ್ಕಾರ

ಉಡುಪಿ: ವಾರೀಸುದಾರರು ಇಲ್ಲದ ಎರಡು ಅಪರಿಚಿತ ಶವಗಳ ಅಂತ್ಯಸಂಸ್ಕಾರವನ್ನು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರು, ನಗರ ಪೊಲೀಸ್ ಠಾಣೆಯ ತನಿಖಾ ಸಹಾಯಕ ವಿಶ್ವನಾಥ್ ಶೆಟ್ಟಿ ಅಮಾಸೆಬೈಲು ಅವರ ಸಮಕ್ಷಮದಲ್ಲಿ ಬೀಡಿನಗುಡ್ಡೆ ಹಿಂದು ರುದ್ರಭೂಮಿಯಲ್ಲಿ ಗುರುವಾರ ನೆರವೇರಿಸಲಾಯಿತು.

ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವ ಎರಡು ಅಪರಿಚಿತ ಪುರುಷ ರೋಗಿಗಳ ಮೃತದೇಹಗಳನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ವಾರೀಸುದಾರರ ಬರುವಿಕೆಗಾಗಿ ರಕ್ಷಿಸಿ ಇಡಲಾಗಿತ್ತು.

ಮಾಧ್ಯಮಗಳಲ್ಲಿ ಮೃತರ ವಾರೀಸುದಾರರ ಗಮನಕ್ಕಾಗಿ ಪ್ರಕಟಣೆಯನ್ನೂ ನೀಡಲಾಗಿತ್ತು. ಕಾಯುವಿಕೆಯ ಕಾಲಮಿತಿ ಕಳೆದರೂ ವಾರೀಸುದಾರರು ಸಂಪರ್ಕಿಸದೆ ಇರುವುದರಿಂದ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ ಒಳಕಾಡು,

ರಾಮದಾಸ್ ಪಾಲನ್ ಉದ್ಯಾವರ, ತಾರಾನಾಥ್ ಮೇಸ್ತ ಶಿರೂರು ಅವರು ಇಲಾಖೆಯ ವಿನಂತಿ ಮೇರೆಗೆ ಕಾನೂನಿನ ನಿಯಮಾವಳಿಯಂತೆ ಅಂತ್ಯಸಂಸ್ಕಾರ ನಡೆಸಿದರು.

ಸುಶೀಲಾ ರಾವ್ ಉಡುಪಿ, ಅಣ್ಣಪ್ಪ ಪೂಜಾರಿ ಕರಂಬಳ್ಳಿ ವಿಷ್ಣು ಫ್ಲವರ್ ಸ್ಟಾಲ್ ನ ಮಾಲೀಕರು ಸಹಕರಿಸಿದರು.

Edited By : Manjunath H D
Kshetra Samachara

Kshetra Samachara

31/12/2020 08:23 pm

Cinque Terre

15.08 K

Cinque Terre

0