ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಮೋದಿ ನೇತೃತ್ವದ ಸರಕಾರದ ಕೃಷಿ ವಿರೋಧಿ ನೀತಿಯನ್ನು ಖಂಡಿಸಿ ಸಿಐಟಿಯು ಪ್ರತಿಭಟನೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಕೃಷಿ ವಿರೋಧಿ ನೀತಿಯನ್ನು ಖಂಡಿಸಿ ನಗರದ ಮಿನಿ ವಿಧಾನಸೌಧದ ಮುಂಭಾಗ ಸಿಐಟಿಯು ಪ್ರತಿಭಟನೆ ನಡೆಸಿತು. ಈ ಸಂದರ್ಭ ಪ್ರತಿಭಟನಾಕಾರರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಕೇಂದ್ರ ಸರಕಾರ ಕಾರ್ಮಿಕರ ವಿರುದ್ಧವಾದ ಕಾನೂನುಗಳನ್ನು ಜಾರಿಗೊಳಿಸಿ ರೈತ ವಿರೋಧಿ ಹಾಗೂ ಕಾರ್ಮಿಕ ವಿರೋಧಿಯಂತೆ ವರ್ತಿಸುತ್ತಿದೆ. ರೈತರು ತಿಂಗಳುಗಟ್ಟಲೆ ದೊಡ್ಡ ಮಟ್ಟದ ಹೋರಾಟ ನಡೆಸಿದ್ದರೂ ಮೋದಿ ಸರಕಾರ ಯಾವುದಕ್ಕೂ ಬಗ್ಗುತ್ತಿಲ್ಲ. ಈ ಮೂಲಕ ಸರಕಾರ ಯಾರ ಪರ ಇದೆ ಎಲ್ಲರಿಗೂ ತಿಳಿಯುವಂತಾಗಿದೆ.

ಕೃಷಿ ಭೂಮಿಗಳು ಉಳ್ಳವರ ಪಾಲಾಗುತ್ತಿದೆ. ಅಲ್ಲದೆ ರೈತರ ಉತ್ಪನ್ನಗಳಿಗೆ ಬೆಲೆ ಇಲ್ಲದಂತೆ ಮಾಡಿ, ರೈತರ ಬದುಕನ್ನು ಸಂಪೂರ್ಣ ನಾಶಗೊಳಿಸುವಂತಹ ಕೃಷಿ ನೀತಿಯನ್ನು ಜಾರಿಗೊಳಿಸುತ್ತಿದೆ. ಆದ್ದರಿಂದ ಇಡೀ ದೇಶದ ರೈತರು ಕೇಂದ್ರ ಸರ್ಕಾರದ ವಿರುದ್ಧ ಪ್ರಬಲವಾದ ಹೋರಾಟ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಐಟಿಯು ಕೂಡಾ ಹೋರಾಟ ಮಾಡುತ್ತಿದೆ ಎಂದು ಸುನಿಲ್ ಕುಮಾರ್ ಬಜಾಲ್ ಹೇಳಿದರು.

Edited By : Manjunath H D
Kshetra Samachara

Kshetra Samachara

08/01/2021 01:06 pm

Cinque Terre

31.09 K

Cinque Terre

5