ಉಡುಪಿ: ಉಡುಪಿ ಜಿಲ್ಲಾ ಮುಜರಾಯಿ ಇಲಾಖೆಯಡಿ ಬರುವ ದೇವಾಲಯಗಳ ಅರ್ಚಕರ ವತಿಯಿಂದ ಉಡುಪಿ ಜಿಲ್ಲಾ ಮುಜರಾಯಿ ಇಲಾಖೆ ದೇವಾಲಯಗಳ ಅರ್ಚಕರ ಸಮಾವೇಶ ಜ.16 ರಂದು ಶನಿವಾರ 10 ಗಂಟೆಗೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.
ಸಮಾವೇಶದ ಉದ್ಘಾಟನೆಯನ್ನು ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಧಾರ್ಮಿಕ ದತ್ತಿ ಮತ್ತು ಮುಜರಾಯಿ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ವಹಿಸಲಿದ್ದಾರೆ. ಸಮಾವೇಶವು ಉಡುಪಿ ಜಿಲ್ಲೆಯ ಶಾಸಕರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದು ಸಮಾವೇಶದ ಆಯೋಜಕರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
Kshetra Samachara
13/01/2021 07:09 pm