ಮಲ್ಪೆ: ಬೀಡಿ ಆ್ಯಂಡ್ ಟೊಬ್ಯಾಕೋ ಲೇಬರ್ ಯೂನಿಯನ್ ಮತ್ತು ಮಲ್ಪೆ ಪ್ರದೇಶ ಬೀಡಿ ಕೆಲಸಗಾರರ ಸಂಘದ ಜಂಟಿ ಮಹಾಸಭೆ ಇಂದು ಉಡುಪಿಯ ಬನ್ನಂಜೆ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಬೀಡಿ ಫೆಡರೇಶನ್ ರಾಜ್ಯ ಅಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ನೆರವೇರಿಸಿದರು. ಅತಿಥಿಗಳಾಗಿ ಉಡುಪಿ ಜಿಲ್ಲಾ ಬೀಡಿ ಫೆಡರೇಶನ್ ಅಧ್ಯಕ್ಷ ಮಹಾಬಲ ವಡೇರಹೋಬಳಿ, ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಕೆ.ಶಂಕರ್, ಉಪಾಧ್ಯಕ್ಷ ಪಿ.ವಿಶ್ವನಾಥ ರೈ, ಜನರಲ್ ವರ್ಕರ್ಸ್ ಯೂನಿಯನ್ ಅಧ್ಯಕ್ಷ ಶಶಿಧರ್ ಗೊಲ್ಲ, ಸಿಐಟಿಯು ಉಡುಪಿ ತಾಲೂಕು ಪ್ರಧಾನ ಕಾರ್ಯದರ್ಶಿ ಕವಿರಾಜ್ ಎಸ್. ಹಾಗೂ ಬೀಡಿ ಸಂಘದ ಸುಂದರಿ, ಜ್ಯೋತಿ, ಸುಗಂಧಿ, ರತ್ನ ಉಪಸ್ಥಿತರಿದ್ದರು. ಉಮೇಶ್ ಕುಂದರ್ ಸ್ವಾಗತಿಸಿ, ಕಾರ್ಯ ಕ್ರಮ ನಿರ್ವಹಿಸಿದರು. ನಳಿನಿ ವಂದಿಸಿದರು.
Kshetra Samachara
01/03/2021 02:22 pm