ಮುಲ್ಕಿ: ಹಳೆಯಂಗಡಿ ಸಮೀಪದ ತೋಕೂರು ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಸಾಹಸ್ ಸಂಸ್ಥೆ ಬೆಂಗಳೂರು ಸಹಯೋಗದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ಸ್ವಚ್ಛತೆ ಮತ್ತು ಪ್ಲಾಸ್ಟಿಕ್ ಬಳಕೆ ಹಾಗೂ ಮನೆ-ಮನೆಗಳಲ್ಲಿ ಘನ ತ್ಯಾಜ್ಯ ಸಂಗ್ರಹಣ ಹಾಗೂ ಬಿತ್ತಿ ಪತ್ರ ಅಳವಡಿಕೆ ಬಗ್ಗೆ ಮಾಹಿತಿ ಶಿಬಿರ ನಡೆಯಿತು.
ಸಾಹಸ್ ಸಂಸ್ಥೆಯ ಕುಮಾರಿ ಪವಿತ್ರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿ ನೀಡಿದರು. ಈ ಸಂದರ್ಭ ಸಂಸ್ಥೆಯ ಅಧ್ಯಕ್ಷ ಸಂತೋಷ್ ದೇವಾಡಿಗ ಮಾತನಾಡಿ ಮುಂದಿನ ದಿನಗಳಲ್ಲಿ ಗ್ರಾಮದ ಮನೆ- ಮನೆಗೆ ಭೇಟಿ ನೀಡಿ ಕಸ ವಿಗಂಡನೆ ಬಗ್ಗೆ ಜಾಗೃತಿ ಮೂಡಿಸಿ,ಹಾಗೂ ಬಿತ್ತಿ ಪತ್ರವನ್ನು ಅಂಟಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪಡುಪಣಂಬೂರು ಗ್ರಾಮ ಪಂಚಾಯತ್ ಸದಸ್ಯರು ಸಂಸ್ಥೆಯ ಗೌರವಾಧ್ಯಕ್ಷರು ,ಅಧ್ಯಕ್ಷರು ,
ಪದಾಧಿಕಾರಿಗಳು, ಸದಸ್ಯರು, ಸದಸ್ಯೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಸಂತೋಷ್ ದೇವಾಡಿಗ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಜಗದೀಶ್ ಕುಲಾಲ್ ವಂದಿಸಿದರು.ಪರಿಸರ ಸಂರಕ್ಷಣಾ ಕಾರ್ಯದರ್ಶಿ ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.
Kshetra Samachara
06/10/2021 08:04 pm