ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುರತ್ಕಲ್: ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಬದ್ಧ; ಮಂಜುನಾಥ್ ಆರ್ ಕೆ

ಸುರತ್ಕಲ್: ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಒಕ್ಕೂಟದ ನೂತನ ರಾಜ್ಯ ಕಾರ್ಯಧ್ಯಕ್ಷರಾಗಿ ಆಯ್ಕೆಯಾದ ಮಂಜುನಾಥ್ ಆರ್ ಕೆ ಮುಲ್ಕಿ ಅವರನ್ನು ಒಕ್ಕೂಟದ ಕೇಂದ್ರ ಕಚೇರಿ ಸುರತ್ಕಲ್‌ನಲ್ಲಿ ಪದಗ್ರಹಣ ಸಮಾರಂಭದಲ್ಲಿ ಗೌರವಿಸಲಾಯಿತು.

ಗೌರವ ಸ್ವೀಕರಿಸಿ ಮಂಜುನಾಥ ಆರ್ ಕೆ ಮಾತನಾಡಿ, ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ಸರಕಾರದಿಂದ ಸಿಗುವ ಸವಲತ್ತುಗಳನ್ನು ಪ್ರಾಮಾಣಿಕವಾಗಿ ದೊರಕಿಸಲು ತಾವು ಬದ್ಧವಾಗಿದ್ದು ಶ್ರಮಿಕ ವರ್ಗದವರಿಗೆ ಸರಕಾರದಿಂದ ಸಿಗುವ ಸವಲತ್ತುಗಳಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಯೋಜನೆ ರೂಪಿಸಲಾಗುವುದು ಎಂದರು.

ಈ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ರಾಜೇಶ್ ಪವಿತ್ರನ್, ಪ್ರಧಾನ ಕಾರ್ಯದರ್ಶಿ ವರ್ನಿತ್ ಶೆಟ್ಟಿ, ಒಕ್ಕೂಟದ ಜಿಲ್ಲಾಧ್ಯಕ್ಷರಾದ ಸುರೇಶ್ ಕೊಟ್ಟಾರ ಚೌಕಿ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

04/11/2021 09:12 am

Cinque Terre

2.69 K

Cinque Terre

0