ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಸ್ಯಾಕ್ಸೋಫೋನ್ ಪ್ರತಿಭೆ ಸಂಜಿತ್ ಎಂ. ದೇವಾಡಿಗ ಮಕ್ಕಳ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಕುಂದಾಪುರ: ಕಾರ್ಕಳ ತಾಲೂಕು ಅಜೆಕಾರಿನ ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಸಮಿತಿಯು ನಾನಾ ಸಂಸ್ಥೆಗಳ ಸಹಯೋಗದೊಂದಿಗೆ ಕೊಡಮಾಡುವ ಮಕ್ಕಳ ಕರ್ನಾಟಕ ರಾಜ್ಯೋತ್ಸವ ಗೌರವ ಪ್ರಶಸ್ತಿಗೆ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸ್ಯಾಕ್ಸೋಫೋನ್ ಬಾಲಪ್ರತಿಭೆ ಸಂಜಿತ್ ಎಂ. ದೇವಾಡಿಗ ಆಯ್ಕೆಯಾಗಿದ್ದಾರೆ.

ಸಂಜಿತ್, ಗಂಗೊಳ್ಳಿಯ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ.

ತಂದೆ ಸ್ಯಾಕ್ಸೋಫೋನ್ ವಾದಕ ಮತ್ತು ಚಿತ್ರಕಲಾ ಶಿಕ್ಷಕ ಮಾಧವ ದೇವಾಡಿಗ ಗಂಗೊಳ್ಳಿ. ತಾಯಿ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಉಪನ್ಯಾಸಕಿಯಾಗಿರುವ ಸಾವಿತ್ರಿ ಮಾಧವ ದೇವಾಡಿಗ.

ನ. 14 ರಂದು ಮಧ್ಯಾಹ್ನ ಅಜೆಕಾರಿನಲ್ಲಿ ಒಟ್ಟು 30 ಪ್ರತಿಭಾನ್ವಿತ ಮಕ್ಕಳಿಗೆ ಧರ್ಮದರ್ಶಿ ಹರಿಕೃಷ್ಣ ಪುನರೂರು ಉಪಸ್ಥಿತಿಯಲ್ಲಿ ಈ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಮಕ್ಕಳ ವಿಭಾಗ ಸಂಚಾಲಕ ಡಾ.ಶೇಖರ ಅಜೆಕಾರು ತಿಳಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

07/11/2021 06:07 pm

Cinque Terre

25.02 K

Cinque Terre

0