ಉಡುಪಿ: ಸರಕಾರವು ಕೊರೋನಾ ತಡೆಗಟ್ಟುವ ಉದ್ದೇಶದಿಂದ ಶುಕ್ರವಾರ ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಪ್ಯೂ ಜಾರಿಗೊಳಿಸಿದೆ. ಸಾರ್ವಜನಿಕರ ಅನುಕೂಲತೆಗಾಗಿ ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ನಗರದಲ್ಲಿ ಉಚಿತ ಅಂಬುಲೆನ್ಸ್ ಸೇವೆಯನ್ನು ಒದಗಿಸಲಿದೆ. ಅಸಹಾಯಕತೆ, ತುರ್ತು ಸಂದರ್ಭ ಎದುರಾದಾಗ ಸಮಿತಿಯ ಸಹಾಯವಾಣಿ 9164901111 ಸಂಪರ್ಕಿಸಬಹುದೆಂದು ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
08/01/2022 11:01 am