ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ನ್ಯಾಯಾಧೀಶರು ,ವಕೀಲರು ,ಕೋರ್ಟ್ ಸಿಬ್ಬಂದಿಯಿಂದ ಸ್ವಚ್ಛತಾ ಕಾರ್ಯಕ್ರಮ

ಉಡುಪಿ: ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯ ಅಂಗವಾಗಿ ಉಡುಪಿಯ ನ್ಯಾಯಾಲಯಗಳ ಸಂಕೀರ್ಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ನ್ಯಾಯಾಧೀಶರು ,ಹಿರಿಯ ಕಿರಿಯ ವಕೀಲರು ಮತ್ತು ನ್ಯಾಯಾಲಯದ ಸಿಬ್ಬಂದಿ ನ್ಯಾಯಾಲಯ ಸಂಕೀರ್ಣದ ಮುಂಭಾಗ ಕಸ ಗುಡಿಸಿ,ಇಡೀ ವಠಾರವನ್ನು ಸ್ವಚ್ಛಗೊಳಿಸಿದರು.ಕಾರ್ಯಕ್ರಮಕ್ಕೆ ಜಿಲ್ಲಾ ನ್ಯಾಯಾಧೀಶರಾದ ಸುಬ್ರಹ್ಮಣ್ಯ ಜೆ.ಎನ್ ,ಫೋಕ್ಸೋ ನ್ಯಾಯಾಧೀಶೆ ಕಲ್ಪನಾ ಎರ್ಮಾಳ್ ,ವಕೀಲರ ಸಂಘದ ಅಧ್ಯಕ್ಷ ಬಿ.ನಾಗರಾಜ್ ಚಾಲನೆ ನೀಡಿದರು.

ಜಿಲ್ಲಾ ನ್ಯಾಯಾಂಗ ಇಲಾಖೆ ,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ,ಜಿಲ್ಲಾ ವಕೀಲರ ಸಂಘ ಮತ್ತು ನಗರಸಭೆ ಸಹಯೋಗದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಲಾ ಎಸ್ ,ಹಿರಿಯ ಸಿವಿಲ್ ನ್ಯಾಯಾಧೀಶೆ ಶಕುಂತಲಾ ,ಹಿರಿಯ ನ್ಯಾಯವಾದಿ ವೀಣಾ ಗಣೇಶ್ ಮಟ್ಟು ದಂಪತಿ ,ಹಿರಿಯ ವಕೀಲೆ ಶ್ರೀಮತಿ ಅಮೃತಕಲಾ,ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ರೊನಾಲ್ಡ್ ಪ್ರವೀಣ್ ಕುಮಾರ್ ,ವಕೀಲರ ಸಂಘದ ಪದಾಧಿಕಾರಿಗಳು ಮತ್ತು ಹಿರಿಯ ಕಿರಿಯ ನ್ಯಾಯಾಧೀಶರು ,ವಕೀಲರು ಮತ್ತು ಕೋರ್ಟ್ ನ ಸಿಬ್ಬಂದಿ ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

30/01/2022 01:14 pm

Cinque Terre

10.16 K

Cinque Terre

1