ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಅಗಲಿದ ಹಿರಿಯ ಪತ್ರಕರ್ತ ಬಿ.ಟಿ.ರಂಜನ್ ಗೆ ಶ್ರದ್ಧಾಂಜಲಿ

ಪುತ್ತೂರು: ಅಗಲಿದ ಹಿರಿಯ ಪತ್ರಕರ್ತರಾದ ಬಿ.ಟಿ.ರಂಜನ್ ಗೆ ಪುತ್ತೂರು ಪತ್ರಿಕಾಭವನದಲ್ಲಿ ಶ್ರದ್ಧಾಂಜಲಿ ಸಭೆ ನಡೆಯಿತು.

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಶ್ರವಣ್‌ ಕುಮಾರ್ ನೇತೃತ್ವದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪುತ್ತೂರು ಪುರಸಭೆಯ ಮಾಜಿ ಅಧ್ಯಕ್ಷ ರಾಜೇಶ್ ಬನ್ನೂರು, ರಂಜನ್ ಗೆ ಸರಿಸಾಟಿಯಾದ ಪತ್ರಕರ್ತ ಇನ್ನೊಬ್ಬರು ಇರಲು ಸಾಧ್ಯವಿಲ್ಲ. ನಿಖರ ಹಾಗೂ ನಿಷ್ಠುರ ವ್ಯಕ್ತಿತ್ವಕ್ಕೆ ಹೆಸರುವಾಸಿಯಾಗಿದ್ದ ಬಿ.ಟಿ.ರಂಜನ್, ಸಮಾಜದ ಎಲ್ಲಾ ಸ್ತರದ ವ್ಯಕ್ತಿಗಳಿಗೆ ತನ್ನ ಬರವಣಿಗೆಯ ಮೂಲಕ ಸ್ಪಂದಿಸಿದ ಪತ್ರಕರ್ತರಲ್ಲಿ ಒಬ್ಬರಾಗಿದ್ದಾರೆ ಎಂದರು.

ಬಿಜೆಪಿ ಹಿಂದುಳಿದ ವರ್ಗದ ಜಿಲ್ಲಾಧ್ಯಕ್ಷ ಆರ್.ಸಿ.ನಾರಾಯಣ್ ಮಾತನಾಡಿ ರಂಜನ್ ಇಲ್ಲ ಎನ್ನುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ತನ್ನ ಜೊತೆಗೆ ನೂರಾರು ಯುವ ಪತ್ರಕರ್ತರನ್ನು ಸಮಾಜಕ್ಕೆ ಪರಿಚಯಿಸಿದ ಕೀರ್ತಿ ರಂಜನ್ ಗೆ ಸಲ್ಲುತ್ತದೆ ಎಂದರು.

Edited By : Manjunath H D
Kshetra Samachara

Kshetra Samachara

05/02/2022 08:38 pm

Cinque Terre

5.97 K

Cinque Terre

0