ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಸಂಪ್ಯ ಪೊಲೀಸ್ ಠಾಣಾ ಸಿಬ್ಬಂದಿ ಹೃದಯಾಘಾತದಿಂದ ನಿಧನ

ಪುತ್ತೂರು: ಸಂಪ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಿಟ್ಲ ಅಡ್ಕಸ್ಥಳ ನಿವಾಸಿ ಗಣೇಶ್(42) ಅವರು ಹೃದಯಾಘಾತದಿಂದಾಗಿ ಇಂದು (ಮಾ.9)ರಂದು ನಿಧನರಾಗಿದ್ದಾರೆ.

ಗಣೇಶ್ ಅವರು ಸ್ವರ್ಗ ಚೆಕ್ಕ್ ಪೋಸ್ಟ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಮನೆಯಲ್ಲಿದ್ದಾಗ ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ. ಗಣೇಶ್ ಅವರು ಈ ಹಿಂದೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬಳಿಕ ಇಲ್ಲಿಂದ ಸಂಪ್ಯ ಠಾಣೆಗೆ ವರ್ಗಾವಣೆಗೊಂಡಿದ್ದರು.

ಮೃತರು ಪತ್ನಿ, ಮಗ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಗಣೇಶ್ ಅವರ ನಿಧನಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ವಿಟ್ಲ ಠಾಣಾ ವೃತ್ತ ನಿರೀಕ್ಷಕರು, ಡಿವೈಎಸ್‌ಪಿ ಹಾಗೂ ಪೊಲೀಸ್ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

09/03/2022 12:38 pm

Cinque Terre

2.92 K

Cinque Terre

0