ಮುಲ್ಕಿ: ಮುಲ್ಕಿ ಸಮೀಪದ ಕಿಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಸಂಘಟಿತ ಕಾರ್ಮಿಕರಿಗೆ ಇ- ಶ್ರಮ ಕಾರ್ಡ್ ವಿತರಣೆಯ ಮೂಲಕ ಆಂದೋಲನಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭ ಕಿಲ್ಪಾ ಡಿ ಗ್ರಾಪಂ ಉಪಾಧ್ಯಕ್ಷ ಗೋಪಿನಾಥ ಪಡಂಗ ಮಾತನಾಡಿ, ಪಂಚಾಯತಿ ವ್ಯಾಪ್ತಿಯ ಅಸಂಘಟಿತ ವರ್ಗದ ಶ್ರಮಿಕರಿಗೆ ಸರಕಾರದಿಂದ ಸಿಗುವ ಸವಲತ್ತುಗಳನ್ನು ಪ್ರಾಮಾಣಿಕ ರೀತಿಯಲ್ಲಿ ಸಿಗುವ ವ್ಯವಸ್ಥೆಯನ್ನು ಮಾಡಿದ್ದು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಈ ಸಂದರ್ಭ ಪಂಚಾಯತ್ ಸದಸ್ಯರಾದ ಶಾಂತ, ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಸಂಜೀವಿನಿ ಒಕ್ಕೂಟದ ಜಯಲಕ್ಷ್ಮಿ, ಗುಲಾಬಿ, ಪಂಚಾಯತ್ ನ ಸುರೇಶ್, ತಾರನಾಥ, ಸಿ ಎಸ್ ಸಿ ಸೆಂಟರ್ ಚೇಳಾಯರು ನ ಬಬಿತ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
12/04/2022 12:58 pm