ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎಸ್​ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ವಿಧಿವಶ

ಬೆಳ್ತಂಗಡಿ: ಎಸ್.ಡಿ.ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ (66) ಅನಾರೋಗ್ಯದಿಂದ ತಡರಾತ್ರಿ ಸಿಂಗಪುರದಲ್ಲಿ ನಿಧನ ಹೊಂದಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಾಪುರಕ್ಕೆ ಚಿಕಿತ್ಸೆಗೆ ತೆರಳಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಬೆಳ್ತಂಗಡಿ ತಾಲ್ಲೂಕಿನ ಪೆರಾಡಿ ಬೀಡು ನಿವಾಸಿಯಾದ ಡಾ.ಬಿ.ಯಶೋವರ್ಮ ಅವರು, ಮೂಡುಬಿದಿರೆ ಜೈನ್ ಹೈಸ್ಕೂಲಿನ 'ಕನ್ನಡ ಪಂಡಿತ'ರೆಂದೇ ಚಿರಪರಿಚಿತರಾಗಿದ್ದ ದಿವಂಗತ ಟಿ. ರಘು ಚಂದ್ರ ಶೆಟ್ಟಿ ಅವರ ಮಗ. ಸಸ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವೀಧರರಾದ ಅವರು ಧಾರವಾಡದಲ್ಲಿ ಜೆಎಸ್‌ಎಸ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಬಳಿಕ ಉಜಿರೆಯ ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದರು. ನಿವೃತ್ತರಾದ ಬಳಿಕ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಯಾಗಿದ್ದರು.

ಉತ್ತಮ ವಾಗ್ಮಿ, ಶಿಸ್ತಿನ ಸಿಪಾಯಿ, ನೇರ ನಡೆ-ನುಡಿಯ ಅವರು ದಕ್ಷ ದಕ್ಷ ಆಡಳಿತಗಾರರಾಗಿದ್ದರು. ಉಜಿರೆಯನ್ನು ಜಾಗತಿಕ ನಕಾಶೆಯಲ್ಲಿ ಗುರುತಿಸುವಂತೆ ಭಗೀರಥ ಪ್ರಯತ್ನ ಮಾಡಿರುವ ಅವರು, ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಅವರ ಸಹೋದರ.

Edited By : Vijay Kumar
PublicNext

PublicNext

23/05/2022 12:17 pm

Cinque Terre

30.73 K

Cinque Terre

22