ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ಗ್ರಾ.ಪಂ. ಮಾಜಿ ಉಪಾಧ್ಯಕ್ಷ, ಸುಬ್ರಹ್ಮಣ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ನಿವಾಸಿ, ಮೂಲತಃ ಬಂಟ್ವಾಳ ತಾಲೂಕಿನ ಕಡೆಶಿವಾಲದ ಮಂಜುನಾಥ ರಾವ್ (55) ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 31ರಂದು ನಿಧನರಾದರು.
ಮೃತರು ಪತ್ನಿ ಇರ್ವರು ಪುತ್ರಿಯರನ್ನು ಅಗಲಿದ್ದಾರೆ. ಮಂಜುನಾಥ ರಾವ್ ಅವರು ಬಿಜೆಪಿ ಸಕ್ರೀಯ ಕಾರ್ಯಕರ್ತರಾಗಿದ್ದರು. ಸುಬ್ರಹ್ಮಣ್ಯದ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ, ಜೇಸಿಐ ಅಧ್ಯಕ್ಷರಾಗಿ, ರೋಟರಿ ಸದಸ್ಯರಾಗಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.
Kshetra Samachara
31/05/2022 10:46 pm