ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹತ್ರಾಸ್ ಘಟನೆ ಅತಿ ಹೇಯ ಕೃತ್ಯ: ಯೋಗಿ ಆದಿತ್ಯನಾಥ್ ರಾಜೀನಾಮೆ ನೀಡಲಿ; ಪಿಎಫ್ ಐ

ಉಡುಪಿ: ಉತ್ತರಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಉಡುಪಿಯ ಅಜ್ಜರಕಾಡು ಹುತಾತ್ಮರ ವೇದಿಕೆ ಎದುರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ ನಡೆಯಿತು.

ಈ ವೇಳೆ ಉತ್ತರ ಪ್ರದೇಶದ ಯೋಗಿ ಸರಕಾರದ ವಿರುದ್ಧ ವಾಗ್ದಾಳಿ ಮಾಡಿದ ಮುಖಂಡರು, ತಕ್ಷಣ ಯೋಗಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಚಿಂತಕ ಫಾದತ್ ವಿಲಿಯಂ ಮಾರ್ಟಿಸ್ ಮಾತನಾಡಿ, ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಉತ್ತರ ಪ್ರದೇಶದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಮತ್ತು ಯುವತಿಯ ಶವ ಸುಟ್ಟು ಹಾಕಿ ಬಳಿಕ ಬಿಜೆಪಿಯವರು ಸುಳ್ಳು ಕತೆ ಕಟ್ಟಿ ಡ್ಯಾಮೇಜ್ ಕಂಟ್ರೋಲ್ ಗೆ ಇಳಿದಿದ್ದಾರೆ. ಯು.ಪಿ.ಯನ್ನು ರಾಮರಾಜ್ಯ ಮಾಡುತ್ತೇವೆ ಎಂದು ಹೇಳಿದವರು ಈಗ ಮಾಡುತ್ತಿರುವುದೇನು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಾರ್ಯಕರ್ತರು ಯೋಗಿ ಹಾಗೂ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

Edited By :
Kshetra Samachara

Kshetra Samachara

09/10/2020 02:31 pm

Cinque Terre

12.52 K

Cinque Terre

2

ಸಂಬಂಧಿತ ಸುದ್ದಿ