ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಎರಡೂ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ: ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ಶಿರಾ ಮತ್ತು ರಾಜರಾಜೇಶ್ವರಿನಗರದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಜಯಭೇರಿ ಭಾರಿಸಲಿದೆ.ಆದರೆ ಈ ಉಪಚುನಾವಣೆಯ ಫಲಿತಾಂಶದಿಂದ ಮೂರೂ ಪಕ್ಷಗಳಲ್ಲಿ ಅಂತ ವ್ಯತ್ಯಾಸ ಆಗುವುದಿಲ್ಲ ,ಸರಕಾರಕ್ಕೂ ಯಾವುದೇ ತೊಂದರೆಯಾಗುವುದಿಲ್ಲ ಎಂದು ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಉಡುಪಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂಸದೆ, ಶಿರಾದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಒಳ್ಳೆಯ ಬೇಸ್ ಇದೆ.ರಾಜರಾಜೇಶ್ವರಿ ನಗರದಲ್ಲಿ ಲೋಕಸಭಾ ಚುನಾವಣೆಯಲ್ಲಿ ಉತ್ತಮ ಮತಗಳನ್ನುಗಳಿಸಿದ್ದೇವೆ.ಸೋಮವಾರದಿಂದ ನಾವೆಲ್ಲ ಅಲ್ಲಿ ಚುನಾವಣೆ ಪ್ರಚಾರದಲ್ಲಿಭಾಗವಹಿಸಲಿದ್ದೇವೆ.ಶಿರಾದಲ್ಲಿ ಕಾಂಗ್ರೆಸ್ ಪಕ್ಷದ ಒಳಗೇ ಭಿನ್ನಮತ ಇದೆ.ಈ ಎರಡೂ ಕ್ಷೇತ್ರವನ್ನು ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Edited By : Nagesh Gaonkar
Kshetra Samachara

Kshetra Samachara

10/10/2020 04:27 pm

Cinque Terre

19.43 K

Cinque Terre

2

ಸಂಬಂಧಿತ ಸುದ್ದಿ