ಬಂಟ್ವಾಳ: ಉಳ್ಳಾಲ ತಾಲೂಕು ರಚನೆಯ ಕಾರ್ಯ ಪ್ರಗತಿಯಲ್ಲಿದ್ದು, ಮಂಗಳೂರು ಕ್ಷೇತ್ರಕ್ಕೆ ಬರುವ ಬಂಟ್ವಾಳದ ಮೂರು ಗ್ರಾಮಗಳನ್ನು ಹೊರತುಪಡಿಸಿ ಉಳಿದ ಎಲ್ಲವು ಕೂಡ ಉಳ್ಳಾಲ ತಾಲೂಕಿಗೆ ಸೇರ್ಪಡೆಗೊಳ್ಳಲಿವೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದ್ದಾರೆ.
ಬಂಟ್ವಾಳದಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ತುಂಬೆ-ಸಜೀಪ ಮಧ್ಯೆ ಸೇತುವೆಯ ಪ್ರಸ್ತಾವನೆ ಸರಕಾರದ ಮುಂದಿದ್ದು, ಅದು ನಿರ್ಮಾಣಗೊಂಡಲ್ಲಿ ಉಳಿದ ಗ್ರಾಮಗಳನ್ನೂ ಉಳ್ಳಾಲಕ್ಕೆ ಸೇರಿಸಲು ಸಹಕಾರಿಯಾಗಲಿದೆ. ಜತೆಗೆ 220 ಕೋ.ರೂ.ಗಳಲ್ಲಿ ಹರೇಕಳ- ಅಡ್ಯಾರ್ ಸೇತುವೆ ಹಾಗೂ 258 ಕೋ.ರೂ.ಗಳ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಶಾಸಕ ಯು.ಟಿ.ಖಾದರ್ ತಿಳಿಸಿದರು. ಈ ಸಂದರ್ಭ ಯು.ಟಿ.ಖಾದರ್ ಅವರ ಹುಟ್ಟುಹಬ್ಬಕ್ಕೆ ಜಿಪಂ ಮಾಜಿ ಸದಸ್ಯ ಉಮ್ಮರ್ ಫಾರೂಕ್, ಇರಾ ಗ್ರಾಪಂ ಮಾಜಿ ಅಧ್ಯಕ್ಷ ಅಬ್ದುರ್ ರಝಾಕ್ ಕುಕ್ಕಾಜೆ, ಪುದು ಪಂಚಾಯಿತಿ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪ್ರಮುಖರಾದ ಮುರಳೀಧರ ಶೆಟ್ಟಿ ನರಿಂಗಾನ, ಇಕ್ಬಾಲ್, ಶಮೀರ್ ಫಜೀರ್, ಮಜೀದ್ ಫರಂಗಿಪೇಟೆ ವೃಂದಾ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಇದೇ ವೇಳೆ ಮಂಗಳೂರು ಕ್ಷೇತ್ರದ ಬಂಟ್ವಾಳ ತಾಲೂಕು ವ್ಯಾಪ್ತಿಯ ಗ್ರಾಮಗಳ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ಹಾಗೂ ಪ್ರಾಕೃತಿಕ ವಿಕೋಪದ ಪರಿಹಾರ ಧನದ ಚೆಕ್ ಅನ್ನು ಮಂಗಳೂರು ಶಾಸಕ ಯು.ಟಿ.ಖಾದರ್ ವಿತರಿಸಿದರು. ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ ಉಪಸ್ಥಿತರಿದ್ದರು. ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಫಲಾನುಭವಿಗಳ ವಿವರ ನೀಡಿದರು. ಗ್ರಾಮಕರಣಿಕರಾದ ನವ್ಯಾ, ಪ್ರಕಾಶ್ ಮತ್ತಿಪಳ್ಳಿ, ಗ್ರಾಮ ಸಹಾಯಕ ಶೀತಲ್ ಸಹಕರಿಸಿದರು. ಒಟ್ಟು 17 ಮಂದಿ ಫಲಾನುಭವಿಗಳಿಗೆ ಹಕ್ಕುಪತ್ರ ಹಾಗೂ 12 ಮಂದಿಗೆ 3.83 ಲಕ್ಷ ರೂ.ಗಳ ಚೆಕ್ ವಿತರಿಸಲಾಯಿತು.
Kshetra Samachara
13/10/2020 05:26 pm