ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಗ್ರಾಪಂ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಅಶಾಂತಿ ಯತ್ನ; ಮೊಯ್ದಿನ್ ಬಾವ

ಮಂಗಳೂರು: ಉಳಾಯಿಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಯೂಸುಫ್ ಅವರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಶಾಸಕ ಮೊಯ್ದಿನ್ ಬಾವ ಅವರು ಬಿಜೆಪಿಯವರಿಗೆ ಬೇಕಾಗಿದ್ದು ಅಲ್ಪಸಂಖ್ಯಾತ ಮುಖಂಡರ ಮೇಲೆ ಹಲ್ಲೆ ಮಾಡಿ ಜಿಲ್ಲೆಯಲ್ಲಿ ಅಶಾಂತಿಯನ್ನು ಸೃಷ್ಟಿಸುವುದು. ಮುಂಬರುವ ಗ್ರಾಮ ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋಮು ಭಾವನೆಯನ್ನು ಕೆರಳಿಸಲು ಬಿಜೆಪಿ ಪಕ್ಷ ಮುಂದಾಗಿದೆ. ಘಟನೆ ಬಗ್ಗೆ ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಕಾಂಗ್ರೆಸ್ ಮುಖಂಡನ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳನ್ನು ಕೂಡಲೆ ಬಂಧಿಸಿ ಕಠಿಣ ಶಿಕ್ಷೆಯನ್ನು ನೀಡಬೇಕು ಎಂದು ಒತ್ತಾಯಿಸಿದರು.

Edited By :
Kshetra Samachara

Kshetra Samachara

15/10/2020 09:25 pm

Cinque Terre

9.74 K

Cinque Terre

4